Home_Page_Advt
Home_Page_Advt
Home_Page_Advt
Breaking News

ನೀರಕಟ್ಟೆ: ಟ್ಯಾಂಕರ್, ಕಂಟೈನರ್ ಡಿಕ್ಕಿ ಟ್ಯಾಂಕರ್ ಚಾಲಕನಿಗೆ ಗಾಯ: ಸಂಚಾರಕ್ಕೆ ಅಡಚಣೆ

nirakatte

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಗ್ಯಾಸ್ ಟ್ಯಾಂಕರ್ ಹಾಗೂ ಕಂಟೈನರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಟ್ಯಾಂಕರ್ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಫೆ.4ರಂದು ರಾತ್ರಿ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸುಮಾರು 1 ತಾಸು ಹೆದ್ದಾರಿ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು ಎಂದು ವರದಿಯಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್(ಕೆಎ 21 ಎ 4944) ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ 10 ಚಕ್ರದ ಕಂಟೈನರ್ ನಡುವೆ ನೀರಕಟ್ಟೆ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ತಮಿಳುನಾಡಿನ ನಾಮಕಲ್ ನಿವಾಸಿ ಮುತ್ತುಸ್ವಾಮಿ(48ವ.)ಎಂಬವರು ಗಾಯಗೊಂಡಿದ್ದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಚಾರಕ್ಕೆ ಅಡಚಣೆ:ಅಪಘಾತದಿಂದಾಗಿ ಎರಡು ವಾಹನಗಳು ಹೆದ್ದಾರಿಯಲ್ಲಿ ನಿಂತಿದ್ದ ಪರಿಣಾಮ ಸುಮಾರು ೧ ತಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕು ಉಂಟಾಗಿತ್ತು ಎಂದು ವರದಿಯಾಗಿದೆ. ಅಪಘಾತವಾಗಿದ್ದ ವಾಹನಗಳನ್ನು ಬದಿಗೆ ಸರಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪುತ್ತೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.