Home_Page_Advt
Home_Page_Advt
Home_Page_Advt
Breaking News

ಕಡಬ: 10 ಕೋಟಿ ಅಂದಾಜುಪಟ್ಟಿಯೊಂದಿಗೆ ಮಿನಿ ವಿಧಾನಸೌಧಕ್ಕೆ ಸಿದ್ಧತೆ 1.60 ಎಕ್ರೆ ಜಮೀನು ಮೀಸಲು; ಆಡಳಿತಾತ್ಮಕ ಅನುಮೋದನೆ ಬಾಕಿ

ಕಡಬ: ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ಇರಬೇಕು ಎನ್ನುವ ಸರಕಾರದ ಆಶಯದಂತೆ ನೂತನ ಕಡಬ ತಾಲೂಕು ಕೇಂದ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ರೂ.10 ಕೋಟಿ ಅಂದಾಜುಪಟ್ಟಿ ತಯಾರಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ.ಸೆ.19ರಂದು ಬೆಂಗಳೂರಿನಲ್ಲಿ ಸಭೆ ನಡೆಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಂಬಂಧಪಟ್ಟ ಕಂದಾಯ ಸಚಿವರು ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 50 ತಾಲೂಕುಗಳಿಗೆ ವಿವಿಧ ಕಚೇರಿಗಳನ್ನು ಮಂಜೂರು ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಹೊಸ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಿಸುವ ಬಗ್ಗೆ ಶೀಘ್ರ ಕ್ರಮಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.

1.60 ಎಕ್ರೆ ಜಮೀನು ಮೀಸಲು:
ಕಡಬ ತಾಲೂಕು ಕೇಂದ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಈಗಾಗಲೇ ನಿರ್ಮಾಣಗೊಂಡಿರುವ ತಹಶೀಲ್ದಾರ್ ಕಚೇರಿ ಸೇರಿದಂತೆ ಸರ್ವೆ ನಂಬ್ರ 130/1 ಎಪಿ2ರಲ್ಲಿ 1.60 ಎಕ್ರೆ ಜಮೀನು ಕಾದಿರಿಸಲಾಗಿದೆ. ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ಹಾಗೂ ಸದ್ರಿ ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಗೆ ವಹಿಸಲು ಸೂಕ್ತ ಆದೇಶ ಹೊರಡಿಸಬೇಕೆಂದು ಸುಳ್ಯ ಶಾಸಕ ಎಸ್.ಅಂಗಾರ ಅವರು ಸರಕಾರದ ಪ್ರಧಾನ ಕಾರ್‍ಯದರ್ಶಿಗೆ ಪತ್ರ ಬರೆದು ಮನವಿ ಮಾಡಿದ್ದು, ಅದರಂತೆ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ನಕ್ಷೆ ಹಾಗೂ ರೇಖಾ ಅಂದಾಜು ಪಟ್ಟಿಯನ್ನು ಕರ್ನಾಟಕ ಗೃಹ ಮಂಡಳಿ ವತಿಯಿಂದ ತಯಾರಿಸಲಾಗಿದೆ ಎಂದು ತಿಳಿದುಬಂದಿದೆ.

ಕಡಬ ತಹಶೀಲ್ದಾರರ ಕೋರಿಕೆಯಂತೆ ತಹಶೀಲ್ದಾರರ ಕಚೇರಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಶಾಸಕರ ಕಚೇರಿ, ಉಪ ನೊಂದಾಣಾಧಿಕಾರಿ ಕಚೇರಿ, ಸರ್ವೆ ಇಲಾಖೆ ಕಚೇರಿ ಹಾಗೂ ಪಿಠೋಪಕರಣಗಳಿಗೆ ಪೂರಕವಾದ ನಕ್ಷೆ ತಯಾರಿಸಿ ತಹಶೀಲ್ದಾರರ ಸಹಿ ಪಡೆದು ರೇಖಾ ಅಂದಾಜುಪಟ್ಟಿಯನ್ನು ತಯಾರಿಸಿ ಕಳುಹಿಸಲಾಗಿದ್ದು ಕರ್ನಾಟಕ ಗೃಹ ಮಂಡಳಿಯ ಕಾರ್ಯಪಾಲಕ ಎಂಜಿನೀಯರ್ ಪರಿಶೀಲಿಸಿರುವ ಅಂದಾಜು ಪಟ್ಟಿಯನ್ನು ಆಡಳಿತಾತ್ಮಕ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಮಕ್ಕೆ ಮನವಿ:
ಕಡಬದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ಎಲ್ಲಾ ಕಚೇರಿಗಳು ಲಭ್ಯವಾಗುವಂತೆ ಸುಮಾರು 10 ಕೋಟಿ ಅಂದಾಜು ಪಟ್ಟಿಯೊಂದಿಗೆ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ನಕ್ಷೆ ಹಾಗೂ ರೇಖಾ ಅಂದಾಜುಪಟ್ಟಿಯನ್ನು ಕರ್ನಾಟಕ ಗೃಹ ಮಂಡಳಿ ವತಿಯಿಂದ ತಯಾರಿಸಲಾಗಿದೆ. ಈ ಅಂದಾಜು ಪಟ್ಟಿಯನ್ನು ಆಡಳಿತಾತ್ಮಕ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು ಅತೀ ಶೀಘ್ರದಲ್ಲಿ ಕಡಬ ತಾಲೂಕಿಗೆ ಪೂರಕವಾದ ಎಲ್ಲಾ ಕಚೇರಿಗಳು ಲಭ್ಯವಾಗಲಿದ್ದು ತಾಲೂಕಿನ ಕಾರ್‍ಯ ಚಟುವಟಿಕೆಗಳು ನಡೆಯಲಿವೆ. – ಎಸ್.ಅಂಗಾರ, ಸುಳ್ಯ ಶಾಸಕರು.

ಕಡಬ ತಾಲೂಕು ಕಚೇರಿಯೊಂದಿಗೆ ಸಂಬಂಧಪಟ್ಟ ಎಲ್ಲಾ ಇಲಾಖಾವಾರು ಕಚೇರಿಗಳನ್ನು ಒಂದೇ ಕಡೆ ನಡೆಯುವಂತೆ ಉತ್ತಮವಾದ ಮಿನಿ ವಿಧಾನಸೌಧವೊಂದನ್ನು ನಿರ್ಮಿಸಿ ಸಾರ್ವಜನಿಕರಿಗೆ ಸಹಕರಿಸುವುದಲ್ಲದೆ ಕಡಬ ಪಟ್ಟಣ ಪಂಚಾಯತ್‌ನ್ನು ಅನುಷ್ಠಾನಗೊಳಿಸಿ ಜನರ ಸೇವೆಗೆ ಮುಂದಾಗಬೇಕಿದೆ. – ಬಾಬು ಮುಗೇರ ಅಧ್ಯಕ್ಷರು ಗ್ರಾ.ಪಂ.ಕಡಬ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.