Home_Page_Advt
Home_Page_Advt
Home_Page_Advt
Breaking News

ಇಚ್ಲಂಪಾಡಿ: ಗ್ರಾಮ ವಿಕಾಸ ಯೋಜನೆ ಕಾಮಗಾರಿಗೆ ಚಾಲನೆ -ಉಳಿಕೆ ಕಾಮಗಾರಿಗಳಿಗೆ ಮುಂದಿನ ಹಂತದಲ್ಲಿ ಅನುದಾನ: ಎಸ್.ಅಂಗಾರ

ನೆಲ್ಯಾಡಿ: ಗ್ರಾಮ ವಿಕಾಸ ಯೋಜನೆಗೆ ಆಯ್ಕೆಗೊಂಡಿರುವ ಇಚ್ಲಂಪಾಡಿ ಗ್ರಾಮಕ್ಕೆ 1 ಕೋಟಿ ರೂ.ಅನುದಾನ ಮಂಜೂರುಗೊಂಡಿದ್ದು ಇದರ ಕಾಮಗಾರಿಗಳಿಗೆ ಸುಳ್ಯ ಶಾಸಕ ಎಸ್.ಅಂಗಾರ ಸೆ.27ರಂದು ಚಾಲನೆ ನೀಡಿದರು. ಇಚ್ಲಂಪಾಡಿ ಗ್ರಾಮದ ಮಾನಡ್ಕ-ಹೊಸಮನೆ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಬಳಿಕ ಇಚ್ಲಂಪಾಡಿ ರಾಜೀವಗಾಂಧಿ ಸೇವಾ ಕೇಂದ್ರದಲ್ಲಿ ನಡೆದ ಸಭಾ ಕಾರ್‍ಯಕ್ರಮದಲ್ಲಿ ಮಾತನಾಡಿದ ಎಸ್.ಅಂಗಾರರವರು, 2007-08ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಗ್ರಾಮ ವಿಕಾಸ ಯೋಜನೆ ಆರಂಭಗೊಂಡಿದೆ. ಈ ಯೋಜನೆಯಡಿ ಪ್ರತಿ ವರ್ಷ 1 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 8 ಗ್ರಾಮಗಳಿಗೆ ಅನುದಾನ ನೀಡಲಾಗುತ್ತಿದೆ. ಈ ವರ್ಷ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆಗೊಂಡಿರುವ ಇಚ್ಲಂಪಾಡಿ ಗ್ರಾಮಕ್ಕೆ 1 ಕೋಟಿ ರೂ.ಅನುದಾನ ಮಂಜೂರುಗೊಂಡಿದೆ. ಆದರೆ 1 ಕೋಟಿ ರೂ.ಅನುದಾನದಲ್ಲಿ ಸಂಪೂರ್ಣ ಅಭಿವೃದ್ಧಿ ಸಾಧ್ಯವಿಲ್ಲ. ಉಳಿಕೆ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಯೋಜನೆಯಡಿ ಹಂತ ಹಂತವಾಗಿ ಅನುದಾನ ಒದಗಿಸಿಕೊಡುವುದಾಗಿ ಹೇಳಿದರು. ಮಾನಡ್ಕ-ಹೊಸಮನೆ ರಸ್ತೆ ಕಾಂಕ್ರಿಟೀಕರಣಕ್ಕೆ ಗ್ರಾಮ ವಿಕಾಸ ಯೋಜನೆಯಡಿ 4.5 ಲಕ್ಷ ರೂ., ಸಂಸದರ ನಿಧಿಯಿಂದ ರೂ.1 ಲಕ್ಷ ಅನುದಾನ ಮಂಜೂರಾಗಿದ್ದು ಶಾಸಕರ ನಿಧಿಯಿಂದ ಮತ್ತೆ 5 ಲಕ್ಷ ರೂ. ಅನುದಾನ ನೀಡಲಾಗುವುದು. ಸದ್ರಿ ರಸ್ತೆಯನ್ನು ಒಟ್ಟು 10.50 ಲಕ್ಷ ರೂ.ಅನುದಾನದಲ್ಲಿ ಕಾಂಕ್ರಿಟೀಕರಣಗೊಳಿಸಲಾಗುವುದು ಎಂದು ಹೇಳಿದ ಶಾಸಕರು, ಅರಣ್ಯ ವ್ಯಾಪ್ತಿಯಲ್ಲಿ ಬರುವ ಪೆರಿಯಶಾಂತಿಯಲ್ಲಿನ 2 ಕಿ.ಮೀ.ರಾಜ್ಯ ಹೆದ್ದಾರಿಯ ದುರಸ್ತಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಇಲ್ಲಿ ತಾತ್ಕಾಲಿಕವಾಗಿ ಜಲ್ಲಿ ಹಾಕಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಕಾಂಕ್ರಿಟೀಕರಣ ಕಾಮಗಾರಿ ನಡೆಸುವ ಸಂಬಂಧ ಪ್ರಸ್ತಾವನೆ ಮಾಡಲಾಗಿದೆ ಎಂದರು.

ಜಿ.ಪಂ.ಸದಸ್ಯ ಸರ್ವೋತ್ತಮ ಗೌಡರವರು ಮಾತನಾಡಿ, ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರ ಅನುದಾನ ನೀಡಿದರೂ ಅದು ಗ್ರಾಮಸ್ಥರದ್ದೇ ತೆರಿಗೆ ಹಣ. ಅಭಿವೃದ್ಧಿ ಕಾಮಗಾರಿಗಳಿಗೆ ಜನರೂ ಸಹಕಾರ ನೀಡಬೇಕು. ರಸ್ತೆ ಅತಿಕ್ರಮಣಗೊಳಿಸದೇ ಅಗಲೀಕರಣದ ವೇಳೆಯಲ್ಲಿ ಜಾಗಬಿಟ್ಟು ಕೊಟ್ಟು ಸಹಕರಿಸಬೇಕು. ಜನರ ಸಹಕಾರವಿದ್ದಲ್ಲಿ ಗ್ರಾಮದ ಅಭಿವೃದ್ದಿಯಾಗಲಿದೆ ಎಂದರು. ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮ ಮಾತನಾಡಿ, ಅಭಿವೃದ್ಧಿ ಕಾಮಗಾರಿಗಳಲ್ಲಿ ರಾಜಕೀಯ,ಧರ್ಮವಿಲ್ಲ. ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಹೋರಾಟ ನಡೆಸುತ್ತೇವೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷ ಎಂ.ಕೆ.ಇಬ್ರಾಹಿಂರವರು ಮಾತನಾಡಿ, ಗ್ರಾಮಕ್ಕೆ ಬಂದಿರುವ ಅನುದಾನ ಸದ್ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಕೈಜೋಡಿಸಬೇಕೆಂದು ಹೇಳಿದರು. ಲೋಕೋಪಯೋಗಿ ಇಲಾಖೆ ಎಇಇ ಸತ್ಯೇಂದ್ರರವರು 1 ಕೋಟಿ ರೂ.ವೆಚ್ಚದಲ್ಲಿ ನಡೆಯುವ ಕಾಮಗಾರಿಗಳ ವಿವರ ನೀಡಿದರು. ಗೋಳಿತ್ತೊಟ್ಟು ಕ್ಷೇತ್ರದ ತಾ.ಪಂ.ಸದಸ್ಯೆ ತೇಜಸ್ವಿನಿಶೇಖರ ಗೌಡ ಕಟ್ಟಪುಣಿ, ರಾಮಕುಂಜ ಕ್ಷೇತ್ರದ ತಾ.ಪಂ.ಸದಸ್ಯೆ ಜಯಂತಿ ಆರ್.ಗೌಡ, ಕೌಕ್ರಾಡಿ ಗ್ರಾ.ಪಂ.ಉಪಾಧ್ಯಕ್ಷೆ ವಾಣಿ ಎನ್., ಸದಸ್ಯರುಗಳಾದ ಮೋಹಿನಿ, ಅನ್ನಮ್ಮ, ಜಾನಕಿ, ಲೋಕೇಶ್ ಬಾಣಜಾಲು, ಹನೀಫ್, ಮಾಂಕು, ರವಿಪ್ರಸಾದ್, ದಿನೇಶ್, ಚೆನ್ನಪ್ಪ, ಪಿಡಿಒ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು. ಕಾರ್‍ಯದರ್ಶಿ ಸತೀಶ್ ಬಂಗೇರ ಕಾರ್‍ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.

ಗುದ್ದಲಿಪೂಜೆಗೆ ಮೊದಲು ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಹರೀಶ್ ಭಟ್‌ರವರು ಪೂಜಾ ವಿಧಿವಿಧಾನ ನೆರವೇರಿಸಿದರು. ಕಾರ್‍ಯಕ್ರಮದಲ್ಲಿ ಎಪಿಎಂಸಿ ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲು, ಗ್ರಾಮಸ್ಥರಾದ ಭಾಸ್ಕರ ಎಸ್.ಗೌಡ ಇಚ್ಲಂಪಾಡಿ, ಗಿರೀಶ್ ಸಾಲಿಯಾನ್ ಬದನೆ, ವರ್ಗೀಸ್ ಅಬ್ರಹಾಂ, ಜಾರ್ಜ್‌ಕುಟ್ಟಿ ಉಪದೇಶಿ, ಬಾಲಕೃಷ್ಣ ಕುಡಾಲ ಮತ್ತಿತರರು ಉಪಸ್ಥಿತರಿದ್ದರು.

ಕಸ್ತೂರಿ ರಂಗನ್ ಬಗ್ಗೆ ಸರ್ವೆ ಆಗಿಲ್ಲ
ಇಚ್ಲಂಪಾಡಿ ಸೇರಿ ಸುಳ್ಯ ಕ್ಷೇತ್ರದ 18 ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯಲ್ಲಿ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಆದರೆ ಸರ್ವೆ ಆಗಿಲ್ಲ. ಇದಕ್ಕೆ ಸಂಬಂಧಿಸಿದ ವರದಿಯನ್ನು ಕೇಂದ್ರ ಸರಕಾರ ಜಾರಿಗೊಳಿಸುತ್ತಿದೆಯಾದರೂ ಅದಕ್ಕೆ ರಾಜ್ಯ ಸರಕಾರದಿಂದ ಪೂರಕವಾದ ವರದಿ ಹೋಗಬೇಕಾಗಿದೆ. ಸುಳ್ಯ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಸೂಕ್ಷ್ಮ ಪ್ರದೇಶಗಳ ಪಟ್ಟಿಯಿಂದ ಕೈಬಿಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ಶಾಸಕ ಎಸ್.ಅಂಗಾರ ಹೇಳಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.