ಕಡಬ ಲಾರಿ-ಕಾರು-ಬೈಕ್ ಡಿಕ್ಕಿ: ಆರು ಮಂದಿಗೆ ಗಾಯ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಲಾರಿ, ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ಕಡಬದ ಹಳೇಸ್ಟೇಷನ್ ಸಮೀಪದ ತಿರುವಿನಲ್ಲಿ ಜೂ.19ರಂದು ಬೆಳಿಗ್ಗೆ ಸಂಭವಿಸಿದೆ.

ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಮಹೀಂದ್ರಾ ಮರಾಝ್ಝೋ ಕಾರು, ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ದ್ವಿಚಕ್ರ ವಾಹನ ಸವಾರರೂ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ಬಳ್ಳಾರಿ ಮೂಲದವರೆಂದು ಗುರುತಿಸಲಾಗಿದ್ದು, ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.