Home_Page_Advt
Home_Page_Advt
Breaking News

ವೈದ್ಯೆಯ ಅಪಮಾನ, ವಿಡಿಯೋ ವೈರಲ್ – ಜಿ.ಪಂ.ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತನ್ನನ್ನು ಜಿ.ಪಂ. ಅಧ್ಯಕ್ಷರು ಸಾರ್ವಜನಿಕವಾಗಿ ತರಾಟೆಗೆತ್ತಿಕೊಂಡ ಮತ್ತು ಅವರ ಹಿಂಬಾಲಕರು ಈ ದೃಶ್ಯಾವಳಿಯನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಮಾನಹಾನಿ ಮಾಡಿದ ಆರೋಪದಡಿ ಜೂ.30ರಂದು ಡಾ.ಅರ್ಚನಾ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಹಿನ್ನಲೆಯಲ್ಲಿ ಜು.1ರಂದು ಸಂಜೆ ವೇಳೆಗೆ ಪೊಲೀಸರು ಜಿ.ಪಂ.ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಪೊಲೀಸ್ ದೌರ್ಜನ್ಯಕ್ಕೊಳಗಾಗಿದ್ದ ಬಾಲಕಿಯನ್ನು ವಿಚಾರಿಸಲೆಂದು ಜೂ.29ರಂದು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದರು. ಈ ಸಂದರ್ಭ ವಿಳಂಬವಾಗಿ ಆಗಮಿಸಿದರೆನ್ನುವ ಕಾರಣಕ್ಕಾಗಿ ಕರ್ತವ್ಯನಿರತ ವೈದ್ಯೆ ಡಾ.ಅರ್ಚನಾ ಅವರನ್ನು ತರಾಟೆಗೆತ್ತಿಕೊಂಡಿದ್ದರು.ಅಲ್ಲಿದ್ದ ಯಾರೋ ಇದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು ಈ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು.ಈ ಘಟನೆಯಿಂದ ಅಸಮಾಧಾನಗೊಂಡ ಡಾ.ಅರ್ಚನಾ ಅವರು ಘಟನೆ ಕುರಿತು ಜಿ.ಪಂ.ಅಧ್ಯಕ್ಷೆ ಮೀನಾಕ್ಷಿಶಾಂತಿಗೋಡು ಅವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಜಿ.ಪಂ.ಅಧ್ಯಕ್ಷರು ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಅವರ ಹಿಂಬಾಲಕರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿ ಮಾನಹಾನಿ ಮಾಡಿರುವ ಕುರಿತು ದೂರಿನಲ್ಲಿ ಆರೋಪಿಸಲಾಗಿತ್ತು.ಮಹಿಳಾ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಅವರು ದೂರು ಸ್ವೀಕರಿಸಿ ಮೇಲಾಧಿಕಾರಿಗಳ ನಿರ್ದೇಶನದಂತೆ ಇದೀಗ ಜಿ.ಪಂ ಅಧ್ಯಕ್ಷರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ (ಐಪಿಸಿ ಸೆಕ್ಷನ್ 353 ಮತ್ತ ಕಲಂ:4 The Karnataka Phohibition of Violence against Medicare service personnel and Damage to Property in Medicare Service Institutions Act 2009) ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.