Home_Page_Advt
Home_Page_Advt
Breaking News

ಪಾಣಾಜೆ: ಜಾನುವಾರುಗಳ ಸಾಮೂಹಿಕ ಜಂತುಹುಳು ನಿವಾರಣಾ ಕಾರ್ಯಕ್ರಮ ಉದ್ಘಾಟನೆ

ನಿಡ್ಪಳ್ಳಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ವ್ಯಾಪ್ತಿಗೆ ಬರುವ ಎಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಸಹಯೋಗದಲ್ಲಿ ಜಾನುವಾರುಗಳ ಸಾಮೂಹಿಕ ಜಂತುಹುಳು ನಿವಾರಣಾ ಕಾರ್ಯಕ್ರಮದ ಉದ್ಘಾಟನೆ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅ.6 ರಂದು ನಡೆಯಿತು.

ದ.ಕ ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು. ಸುಳ್ಯ ತಾಲೂಕಿನ ಪಶು ವೈದ್ಯಾಧಿಕಾರಿ ಡಾ.ಕೇಶವ ಸುಳಿ ಜಂತುಹುಳು ನಿವಾರಣಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಹಿರಿಯ ನಿರ್ದೇಶಕ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ದ.ಕ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಶ್ರೀನಿವಾಸ್ ಉಪಸ್ಥಿತರಿದ್ದರು. ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಸ್ವಾಗತಿಸಿ ವಂದಿಸಿದರು.ಪಾಣಾಜೆ ಸಂಘದ ನಿರ್ದೇಶಕರು, ಸದಸ್ಯರು ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.