Home_Page_Advt
Home_Page_Advt
Breaking News

ಒಳಮೊಗ್ರು ಗ್ರಾ.ಪಂ ಸಾಮಾನ್ಯ ಸಭೆ

  • ಶೀಘ್ರದಲ್ಲೇ ಪಂಚಾಯತ್ ವ್ಯಾಪ್ತಿಯ ವಾಟರ್‌ಮೆನ್‌ಗಳ ಸಭೆ: ಒಳಮೊಗ್ರು ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ತೀರ್ಮಾನ

 

ಪುತ್ತೂರು: ಗ್ರಾ.ಪಂ ವ್ಯಾಪ್ತಿಯ ನೀರಿನ ಬಳಕೆದಾರರ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ನೀರಿನ ಬಿಲ್ ಪಾವತಿ ಸಮರ್ಪಕವಾಗಿ ಪಾವತಿಯಾಗುವ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಮಹತ್ವ ಚರ್ಚೆ ಒಳಮೊಗ್ರು ಗ್ರಾ.ಪಂ ಸಾಮಾನ್ಯ ಸಭೆಯಲ್ಲಿ ನಡೆಯಿತು. ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಟರ್‌ಮೆನ್‌ಗಳ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ನೀರಿನ ವಿಚಾರವಾಗಿ ಸದಸ್ಯರಾದ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಮಹೇಶ್ ಕೇರಿ, ಶಶಿಕಿರಣ್ ರೈ, ಜಯರಾಮ ರೈ ಮೊದಲಾದವರು ಮಾತನಾಡಿದರು. ಗ್ರಾ.ಪಂ ಅಧ್ಯಕ್ಷ ಯತಿರಾಜ್ ರೈ ನೀರ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುನಂದ ವೇದಿಕೆಯಲ್ಲಿದ್ದರು. ಪಿಡಿಓ ಗೀತಾ ಬಿ.ಎಸ್ ವಿವಿಧ ಮಾಹಿತಿ ನೀಡಿದರು. ಕಾರ್ಯದರ್ಶಿ ದಾಮೋದರ ವರದಿ ಮಂಡಿಸಿದರು. ಸಿಬ್ಬಂದಿ ಗುಲಾಬಿ ಅರ್ಜಿ ವಾಚಿಸಿದರು. ಸಭೆಯಲ್ಲಿ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.