Home_Page_Advt
Home_Page_Advt
Home_Page_Advt
Breaking News

ನೆಲ್ಯಾಡಿ ಗ್ರಾ.ಪಂ.ಸಾಮಾನ್ಯ ಸಭೆ

  • 1 ತಿಂಗಳ ಗೌರವ ಧನ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಲು ನಿರ್ಣಯ

ನೆಲ್ಯಾಡಿ: ನೆಲ್ಯಾಡಿ ಗ್ರಾ.ಪಂ.ನ 14 ಮಂದಿ ಸದಸ್ಯರ 1 ತಿಂಗಳ ಗೌರವ ಧನವನ್ನು ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ಮುಖ್ಯಮಂತ್ರಿಗಳ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಲು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಸಭೆ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಸದಸ್ಯ ಅಬ್ದುಲ್ ಹಮೀದ್‌ರವರು ವಿಷಯ ಪ್ರಸ್ತಾಪಿಸಿ,ರಾಜ್ಯದಲ್ಲಿ ಸಂಭವಿಸಿದ ಭೀಕರ ನೆರೆ ಪರಿಸ್ಥಿತಿಯಿಂದಾಗಿ ಸಾವಿರಾರು ಮಂದಿ ಮನೆ, ಕೃಷಿ ಜಾಗ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಇವರಿಗೆ ಮಾನವೀಯ ನೆಲೆಯಲ್ಲಿ ನಾವು ನೆರವು ನೀಡಬೇಕಾಗಿದೆ. ಆದ್ದರಿಂದ ಸದಸ್ಯರ 1 ತಿಂಗಳ ಗೌರವಧನವನ್ನು ಮುಖ್ಯಮಂತ್ರಿಗಳ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಸಮರ್ಪಿಸೋಣ ಎಂದರು. ಇದಕ್ಕೆ ಎಲ್ಲಾ ಸದಸ್ಯರು ಸಹಮತ ಸೂಚಿಸಿದರು. ಬಳಿಕ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಅರಣ್ಯ ಇಲಾಖೆ ಆಕ್ಷೇಪಕ್ಕೆ ಆಕ್ರೋಶ: ನೆಲ್ಯಾಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿಗೆ 24.40 ಎಕ್ರೆ ಜಾಗ ಮಂಜೂರುಗೊಂಡು ಆರ್‌ಟಿಸಿಯೂ ಆಗಿದೆ. ಆದರೆ ಈಗ ಇದಕ್ಕೆ ಅರಣ್ಯ ಇಲಾಖೆಯವರು ಅಡ್ಡಿಪಡಿಸುತ್ತಿರುವುದಕ್ಕೆ ಸಭೆಯಲ್ಲಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಘಟಕ ಕಾಲೇಜಿಗೆ ಮಂಜೂರಾಗಿರುವ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಅರಣ್ಯ ಇಲಾಖೆ ಸಹಕಾರ ನೀಡಬೇಕೆಂದು ಸದಸ್ಯರು ಆಗ್ರಹಿಸಿದರು.

ಕುಡಿಯುವ ನೀರಿನ ಬಳಕೆದಾರರು ಪ್ರತಿ ತಿಂಗಳು ನೀರಿನ ಬಿಲ್ಲು ಕಡ್ಡಾಯವಾಗಿ ಪಂಚಾಯತ್‌ಗೆ ಸಲ್ಲಿಸಬೇಕು. ಎರಡು ತಿಂಗಳಿಗಿಂತ ಜಾಸ್ತಿ ಮೊತ್ತ ಉಳಿಸಿಕೊಂಡಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಗ್ರಾ.ಪಂ.ನ ಸದಸ್ಯರ ಸಂಬಂಧಿಕರು ಕಾಮಗಾರಿಯ ಗುತ್ತಿಗೆ ಪಡೆದುಕೊಂಡಿದಲ್ಲಿ ಸದಸ್ಯರು ಕಾಮಗಾರಿ ವಿಚಾರದಲ್ಲಿ ಹಸ್ತಕ್ಷೇಪ ಮಾಡದಂತೆ ಹಾಗೂ ಕಾಮಗಾರಿಗಳ ಬಿಲ್ಲು ಪಾವತಿಗೆ ಮೊದಲು ಆಯಾ ವಾರ್ಡ್‌ನ ಸದಸ್ಯರ ಉಪಸ್ಥಿತಿಯೊಂದಿಗೆ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕವೇ ಬಿಲ್ಲು ಪಾವತಿಗೆ ನಿರ್ಣಯ ಕೈಗೊಳ್ಳಲಾಯಿತು. ಘನ ತ್ಯಾಜ್ಯ ಘಟಕ ನಿರ್ವಹಣೆಗೆ ಸಂಬಂಧಿಸಿ ವಂಡ್ಸೆ ಅಥವಾ ನಿಟ್ಟೆ ಗ್ರಾ.ಪಂ.ಗೆ ಭೇಟಿ ನೀಡಿ ಮಾಹಿತಿ ಪಡೆಯಲು ನಿರ್ಧರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಗಂಗಾಧರ ಶೆಟ್ಟಿಯವರು ಮಾತನಾಡಿ, ಗ್ರಾಮದ ಸಮಗ್ರ ಅಭಿವೃದ್ದಿಯಲ್ಲಿ ಎಲ್ಲರೂ ಪೂರಕವಾಗಿ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ಮಾಡಬೇಕು ಎಂದರು. ಸಿಬ್ಬಂದಿ ಶಿವಪ್ರಸಾದ್ ಕಳೆದ ತಿಂಗಳ ಖರ್ಚು ವೆಚ್ಚಗಳ ಮಾಹಿತಿ ನೀಡಿದರು. ಪಿ.ಡಿ.ಒ. ಮಂಜುಳ ಎನ್., ಸ್ವಾಗತಿಸಿದರು. ಕಾರ್ಯದರ್ಶಿ ದೇವರಾಜ್ ವಂದಿಸಿದರು. ಉಪಾಧ್ಯಕ್ಷೆ ಉಮಾವತಿ, ಸದಸ್ಯರುಗಳಾದ ಜಯಾನಂದ ಬಂಟ್ರಿಯಾಲ್, ಅಬ್ದುಲ್ ಹಮೀದ್, ಕೆ.ಪಿ ಅಬ್ರಹಾಂ, ತೀರ್ಥೆಶ್ವರ ಉರ್ಮಾನು, ವಿನೋದರ, ಲೈಲಾತೋಮಸ್, ಪ್ಲೋರಿನಾ ಡಿಸೋಜಾ, ಚಿತ್ರಾ ರಾಮನಗರ, ಮೋಹಿನಿಯವರು ಚರ್ಚೆಯಲ್ಲಿ ಭಾಗವಹಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.