Home_Page_Advt
Home_Page_Advt
Home_Page_Advt
Breaking News

ಪುತ್ತೂರು ಅಂಚೆ ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು: ಕರ್ನಾಟಕ ಅಂಚೆ ವೃತ್ತವು ಖಾಲಿ ಇರುವ ಅಂಚೆ ಪಾಲಕ, ಸಹಾಯಕ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ, ಹೆಬ್ರಿ, ಮೂಡಬಿದ್ರೆ ಮತ್ತು ಕಾರ್ಕಳ ತಾಲೂಕುಗಳನ್ನೊಳಗೊಂಡ ಪುತ್ತೂರು ಅಂಚೆ ವಿಭಾಗದಲ್ಲಿ 72 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಆನ್‌ಲೈನ್ ಮೂಲಕ ಎಸ್ಸೆಸ್ಸೆಲ್ಸಿ ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4 ಕೊನೆಯ ದಿನ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಿನಾಯಿತಿ ಇರುತ್ತದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ವಯೋಮಿತಿ ಸಡಿಲಿಕೆ ಇರುವುದಿಲ್ಲ. ಅಂಗವಿಕಲರಿಗೆ 10ವರ್ಷಗಳ ಸಡಿಲಿಕೆ ಇರುತ್ತದೆ.

ಎಲ್ಲಾ ಹುದ್ದೆಗಳಿಗೂ ಎಸ್ಸೆಸ್ಸೆಲ್ಸಿ ಪಾಸಾಗಿರುವುದು ಕಡ್ಡಾಯ. ಅರ್ಜಿ ಸಲ್ಲಿಸುವವರು ಕನಿಷ್ಠ 60 ದಿನಗಳ ಕಡ್ಡಾಯ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಶಾಖಾ ಅಂಚೆ ಪಾಲಕರಾಗಿದ್ದಲ್ಲಿ 25 ಸಾವಿರ ಬಾಂಡ್, ಉಪ ಶಾಖಾ ಅಂಚೆ ಪಾಲಕ/ಡಾಕ್ ಸೇವಕರಾಗಿದ್ದಲ್ಲಿ 10 ಸಾವಿರ ಬಾಂಡ್ ಸಲ್ಲಿಸಬೇಕಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ http://indiapost.gov.in ಅಥವಾ http://appost.in/gdsonline ವೆಬ್‌ಸೈಟ್ ಸಂದರ್ಶಿಸಬಹುದು.

ನೇಮಕಾತಿ ಮೆರಿಟ್ ಆಧಾರದಲ್ಲಿ ನಡೆಯುತ್ತಿದ್ದು, ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ ಮತ್ತು ಮಧ್ಯವರ್ತಿಗಳಿಗೆ ಅವಕಾಶವಿರುವುದಿಲ್ಲ ಎಂದು ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

2 Comments

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.