Home_Page_Advt
Home_Page_Advt
Home_Page_Advt
Breaking News

ಕೋಡಿಂಬಾಡಿ: ಯುವಶಕ್ತಿ ಗೆಳೆಯರ ಬಳಗದಿಂದ 20ನೇ ವರುಷದ ಮೊಸರು ಕುಡಿಕೆ ಉತ್ಸವ

ಪುತ್ತೂರು: ಯುವಶಕ್ತಿ ಗೆಳೆಯರ ಬಳಗ ವಿನಾಯಕ ನಗರ ಇದರ ವತಿಯಿಂದ ಕೋಡಿಂಬಾಡಿ ಹಿ.ಪ್ರಾ.ಶಾಲಾ ವಠಾರದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವ ಆ.25ರಂದು ನಡೆಯುತ್ತಿದೆ.

ಎಸ್.ಡಿ.ಎಂ.ಸಿ. ಅಧ್ಯಕ್ಷೆ ಚಿತ್ರಾ ಸುರೇಶ್ ಗೌಡ ಬೋಳಾಜೆ ಉದ್ಘಾಟನೆ ನೆರವೇರಿಸಿದರು. ಗೆಳೆಯರ ಬಳಗದ ಗೌರವಾಧ್ಯಕ್ಷ ರಮೇಶ್ ನಾಯಕ್ ನಿಡ್ಯ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ರಾಮಚಂದ್ರ ಗೌಡ, ಸದಸ್ಯ ರಾಮಚಂದ್ರ ಪೂಜಾರಿ ಶಾಂತಿನಗರ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ, ಮಾಜಿ ಸೈನಿಕರಾದ ನಾಯಕ್ ಸುಭೇದಾರ್ ಕೆ.ಸಿ.ರಘು ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉದ್ಘಾಟನೆ ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು ಸಂಜೆ ತಾ.ಪಂ.ಅಧ್ಯಕ್ಷ ಕೆ.ರಾಧಾಕೃಷ್ಣ ಬೋರ್ಕರ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಮೆಸ್ಕಾಂ ಸಿಬ್ಬಂದಿ ಜಗನ್ನಾಥ ಪಿ.ರವರಿಗೆ ಸನ್ಮಾನ ನಡೆಯಲಿದೆ. ಗೆಳೆಯರ ಬಳಗದ ಅಧ್ಯಕ್ಷ ಯೋಗೀಶ್ ಸಾಮಾನಿ ಸಂಪಿಗೆದಡಿ, ಕಾರ್ಯದರ್ಶಿ ದಿನೇಶ್ ಶೆಟ್ಟಿ ಪಿಜಿನಡ್ಕ, ಕ್ರೀಡಾ ಕಾರ್ಯದರ್ಶಿ ವಿಜಯ ನಾಯ್ಕ ಲಿಂಗಪಾಲು ಮತ್ತು ಪದಾಧಿಕಾರಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.