Home_Page_Advt
Home_Page_Advt
Home_Page_Advt
Breaking News

ಮುಕ್ಕೂರು: ಬೈಕ್ ನಡುವೆ ಅಪಘಾತ – ಪ್ರಗತಿಪರ ಕೃಷಿಕ ಅಡ್ಯತಕಂಡ ಪುರುಷೋತ್ತಮ ಗೌಡ ದುರ್ಮರಣ

ಸವಣೂರು: ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕಾಯರ್ಮಾರ್ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಕೂಟಿ ಸವಾರ ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42) ಅವರು ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆ.24 ರಂದು ರಾತ್ರಿ ಅಪಘಾತ ಸಂಭವಿಸಿತ್ತು. ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.‌ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರುಷೋತ್ತಮ ಗೌಡ ಅವರು ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಆರಂಭಿಸಲು ಶ್ರಮಿಸಿ ಅದರ ಸ್ಥಾಪಕ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು. ಅಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದರು.

ಪ್ರಗತಿಪರ ಕೃಷಿಕರೂ ಆಗಿದ್ದ ಇವರು ಈ ಭಾಗದಲ್ಲಿ ಯಾವುದೇ ತುರ್ತು ವೈದ್ಯಕೀಯ ಅಗತ್ಯ ಸಂದರ್ಭಗಳಲ್ಲಿ ಊರಿನವರಿಗೆ ರಾತ್ರಿ ಹಗಲೆನ್ನದೆ ತನ್ನ ಜೀಪಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.