Home_Page_Advt
Home_Page_Advt
Home_Page_Advt
Home_Page_Advt
Breaking News

ತ್ಯಾಗರಾಜನಗರ: ಹಿಂದೂ ಜಾಗರಣ ವೇದಿಕೆ ವಾರ್ಷಿಕೋತ್ಸವ, ಮಜ್ಜಾರಡ್ಕದಲ್ಲಿ ರಕ್ತದಾನ ಶಿಬಿರ, ಮಾಹಿತಿ ಕಾರ್ಯಕ್ರಮ

ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ಹಿಂದೂ ಜಾಗರಣ ವೇದಿಕೆಯ 17 ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸೆ.02 ರಂದು ಮಜ್ಜಾರಡ್ಕ ಅಂಗನವಾಡಿ ಕೇಂದ್ರದ ವಠಾರದಲ್ಲಿ ರಕ್ತದಾನ ಶಿಬಿರ ಮತ್ತು ರಕ್ತದಾನದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಿಬಿರವನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ನಯನಾ ರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಪುತ್ತೂರು ಪ್ರಖಂಡದ ಉಪಾಧ್ಯಕ್ಷ ನರಸಿಂಹ ಪೂಂಜಾ, ಜಾಗರಣ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಮಾಡದಗುಡ್ಡೆ ಉಪಸ್ಥಿತರಿದ್ದರು.

ರೋಟರಿ ಬ್ಲಡ್ ಬ್ಯಾಂಕ್‌ನ ಮೆಡಿಕಲ್ ಆಫೀಸರ್ ಡಾ. ರಾಮಚಂದ್ರ ಭಟ್‌ರವರು ರಕ್ತದಾನ ಮಾಡುವುದರಿಂದ ದೇಹಕ್ಕೆ ಸಿಗುವ ಲಾಭಗಳು ಮತ್ತು ರಕ್ತದಾನದಿಂದ ವ್ಯಕ್ತಿಯೊಬ್ಬರ ಪ್ರಾಣ ಉಳಿಸುವ ಬಗೆಯನ್ನು ತಿಳಿಸಿದರು. ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆಗಳಿಲ್ಲ ಎಂದ ಅವರು, ರಕ್ತದಾನದ ಬಗ್ಗೆ ಯಾವುದೇ ಭಯಪಡುವ ಅವಶ್ಯಕತೆ ಇಲ್ಲ ಎಂದರು.

ಸುಮಾರು 35 ಕ್ಕೂ ಅಧಿಕ ಮಂದಿ ಈ ಸಂದರ್ಭದಲ್ಲಿ ರಕ್ತದಾನ ಮಾಡಿದರು. ಜಾಗರಣ ವೇದಿಕೆಯ ಕಾರ್ಯದರ್ಶಿ ಯಕ್ಷಿತ್ ಸ್ವಾಮಿನಗರ, ಉಪಾಧ್ಯಕ್ಷ ಪ್ರವೀಣ್ ಪಾಪೆಜಾಲು ಹಾಗೂ ಸದಸ್ಯರುಗಳು ಸಹಕರಿಸಿದ್ದರು.

ಇಂದು ವಾರ್ಷಿಕೋತ್ಸವ, ಸಾಮೂಹಿಕ ಗಣಪತಿ ಹೋಮ
ಸೆ.04 ರಂದು ಬೆಳಿಗ್ಗೆ ತ್ಯಾಗರಾಜನಗರದಲ್ಲಿರುವ ಕಟ್ಟೆಯಲ್ಲಿ 17ನೇ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಗಣಪತಿ ಹವನ ನಡೆಯಲಿದೆ. ಬೆಳಿಗ್ಗೆ ಗಣಪತಿಹವನ ಆರಂಭಗೊಂಡು ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಶಾಲಾ ಮಕ್ಕಳಿಗೆ, ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.