Home_Page_Advt
Home_Page_Advt
Home_Page_Advt
Home_Page_Advt
Breaking News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗೋ ಶಾಲೆ ತೆರೆಯಲು ವಿ.ಹಿಂ.ಪ, ಬಜರಂಗದಳದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

ಪುತ್ತೂರು: ಜಿಲ್ಲೆಯ ಮೂರುನಾಲ್ಕು ದೇವಸ್ಥಾನಗಳಲ್ಲಿ ಗೋ ಶಾಲೆ ತೆರೆಯುವ ಕುರಿತು ಚಿಂತನೆ ನಡೆಸಿರುವ ರಾಜ್ಯದ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವಿ.ಹಿಂ.ಪ ಮತ್ತು ಬಜರಂದಳದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗೋ ಶಾಲೆ ತೆರೆಯುವಂತೆ ಮನವಿ ಮಾಡಿದರು.

ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ನೇತೃತ್ವದಲ್ಲಿ ಬಿಜೆಪಿ ಕಚೇರಿಯಲ್ಲಿ ಸಲ್ಲಿಸಿದ ಮನವಿಯಲ್ಲಿ ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎ ಕ್ಲಾಸ್ ದೇವಸ್ಥಾನ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಗೋ ಶಾಲೆಯನ್ನು ತೆರೆಯಬೇಕೆಂದು ವಿನಂತಿಸಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶಾಸಕರಲ್ಲಿ ಈ ಕುರಿತು ಸೂಕ್ತ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಬಜರಂಗದಳದ ಹರೀಶ್ ದೋಳ್ಪಾಡಿ, ಶ್ರೀಧರ್ ತೆಂಕಿಲ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.