Home_Page_Advt
Home_Page_Advt
Home_Page_Advt
Home_Page_Advt
Breaking News

ಬಿಪಿಎಲ್ ಪಡಿತರ ಚೀಟಿದಾರರು ಸೆ.30ರ ಮೊದಲು ಸೂಕ್ತ ಮಾಹಿತಿ ನೀಡಲು ಸೂಚನೆ

 

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿಗಳ ಪಟ್ಟಿಯನ್ನು ಗಮನಿಸಲಾಗಿ ಬಿಪಿಎಲ್ ಹೊಂದಲು ಅನರ್ಹವಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಹಾಗೂ ಇಲಾಖಾ ಮಾನ ದಂಡಗಳನ್ನು ಮರೆ ಮಾಚಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡುಬಂದಿದೆ ಎಂದು ತಹಸೀಲ್ದಾರರು ತಿಳಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿ ಪಡೆಯಲು ಅವಕಾಶವಿಲ್ಲದ ಅಂಶಗಳು: ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್ ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತು ಪಡಿಸಿ ೪ ಚಕ್ರದ ಬಿಳಿ ಬೋರ್ಡ್ ವಾಹನವನ್ನು ಹೊಂದಿರುವುದು, ಕುಟುಂಬದಲ್ಲಿ ಸರ್ಕಾರಿ ನೌಕರಿದಾರರು ಇರುವುದು, ಆದಾಯ ತೆರಿಗೆಯನ್ನು ಪಾವತಿಸುವ ಕುಟುಂಬ ಗಳು, ಕುಟುಂಬವು ಸದ್ರಿ ವಿಳಾಸದಲ್ಲಿ ವಾಸ್ತವ್ಯವಿಲ್ಲದೇ ಇರುವುದು, ಒಂದೇ ಮನೆ ಯಲ್ಲಿ ವಾಸವಿದ್ದು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವುದು, ೭.೫ ಎಕರೆಗಿಂತ ಹೆಚ್ಚಿನ `ಡಿ’ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವುದು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಹೊಂದಿರುವ ಕುಟುಂಬಗಳು, ಮೃತರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು/ಪಡಿತರ ಚೀಟಿಯನ್ನು ರದ್ದುಗೊಳಿಸದೇ ಇರುವುದು, ವಾರ್ಷಿಕ 1,12,೦೦೦ ಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು.

ಈ ಅಂಶಗಳಿಗೆ ಒಳಪಡುವ ಕುಟುಂಬಗಳು ಹಾಗೂ ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಕುಟುಂಬಗಳು ಪ್ರಸ್ತುತ ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿ ದ್ದಲ್ಲಿ ಸ್ವಯಂ ಪ್ರೇರಿತವಾಗಿ ತಾಲೂಕು ಕಚೇರಿಯ ಆಹಾರ ಶಾಖೆಗೆ ಸೂಕ್ತ ಮಾಹಿತಿ ಯನ್ನು ಸೆ.30-2019ರ ಒಳಗಾಗಿ ನೀಡತಕ್ಕದ್ದು. ತಪ್ಪಿದಲ್ಲಿ ಸರ್ಕಾರದ ಆದೇಶ ಸಂಖ್ಯೆ ಎಫ್.ಎಫ್.ಡಿ.32, ಎಒಎಮ್ 77. ದಿನಾಂಕ-23/09/1977 ಹಾಗೂ ಭಾರತ ದಂಡ ಸಂಹಿತೆ ಅಡಿಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.