Home_Page_Advt
Home_Page_Advt
Home_Page_Advt
Home_Page_Advt
Breaking News

ಆಲಂಕಾರು: ಕಡಬ ವೃತ್ತ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಆಲಂಕಾರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕೇತ್ರ ಶಿಕ್ಷಣಾಧಿಕಾರಿ ಕಛೇರಿ ಪುತ್ತೂರು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಆಶ್ರಯದಲ್ಲಿ ಕಡಬ ವೃತ್ತ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019-20 ಆಲಂಕಾರು ದುರ್ಗಾಂಬಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಉದ್ಘಾಟಿಸಿ ಮಾತನಾಡಿ ಪ್ರತಿಭಾ ಕಾರಂಜಿಯಂತ ಕಾರ್ಯಕ್ರಮದಿಂದ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಸರಿಯಾದ ವೇದಿಕೆಯನ್ನು ಒದಗಿಸಿಕೊಟ್ಟಾಗ ಅವರವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಯಾಗಿದ್ದು ಶಿಕ್ಷಕರು ಮಾಡುವ ಸಾಧನೆಯನ್ನು ವಿದ್ಯಾರ್ಥಿಗಳ ಮೂಲಕ ಸಾಧಿಸಿದಾಗ ಆ ಶಿಕ್ಷಕವೃತ್ತಿಗೆ ಸಾರ್ಥಕತೆ ಬರುತ್ತದೆ ಎಂದು ಹೇಳಿ ಒಂದು ಮಗುವಿಗೆ ಪರಿಪೂರ್ಣ ಶಿಕ್ಷಣ, ಸಂಸ್ಕಾರ, ಸಂಸ್ಕ್ರತಿ ನೀಡಿದಾಗ ಆ ಮಗು ಪರಿಪೂರ್ಣವಾಗಿ ಶಿಕ್ಷಣ ಸಂಸ್ಥೆಯಿಂದ ಹೊರ ಹೊಮ್ಮುತ್ತಾರೆ ಎಂದು ತೀಳಿಸಿದರು.

ಸಭಾಧ್ಯಕ್ಷತೆ ವಹಿಸಿದ್ದ ಆಲಂಕಾರು ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಾಯಾನಂದ ರೈ ಮನವಳಿಕೆ ಮಾತನಾಡಿ ವಿದ್ಯಾರ್ಥಿಗಳೆಂದರೆ ಪ್ರತಿಭೆಗಳ ಸಂಗಮ, ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಕ್ಲಿಷ್ಟಕರ ಸನ್ನಿವೇಶಗಳನ್ನು ಕೂಡಾ ಅರಗಿಸಿಕೊಳ್ಳುವ ಶಕ್ತಿ ಸಾಮರ್ಥ್ಯಗಳಿದ್ದು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಿಂದ ನೈಜ ಪ್ರತಿಭೆಗಳು ಹೊರ ಹೊಮ್ಮಲಿ ಎಂದು ಹೇಳಿ ಆಗಮಿಸಿದ ಎಲ್ಲಾ ಅತಿಥಿ ಮಹಾನಿಯರಿಗೆ, ವಿದ್ಯಾರ್ಥಿ ವಿಧ್ಯಾರ್ಥಿನಿಯರಿಗೆ, ಪೋಷಕರಿಗೆ ವಿದ್ಯಾ ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಬೆಳಂದೂರು ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಮೀಳಾ ಜನಾರ್ಧನ, ಕ್ಷೇತ್ರ ಶಿಕ್ಷಣಾಧಿಕಾರಿ ಇಲಾಖೆಯಿಂದ ದಿನೇಶ್, ಸಿಆರ್‌ಪಿ ಪ್ರದೀಪ್ ಬಾಕಿಲ, ನೋಡೆಲ್ ಅಧಿಕಾರಿ ಸತೀಶ್ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರತಿಭಾ ಕಾರಂಜಿಯಲ್ಲಿ ಬಹುಮಾನ ಮುಖ್ಯವಲ್ಲ ವಿದ್ಯಾರ್ಥಿಗಳಿಗೆ ವೇದಿಕೆ ಒದಗಿಸುವುದು ಮುಖ್ಯ ಎನ್ನುವ ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ಇದರಲ್ಲಿ ನೈಜ ಪ್ರತಿಭೆ ಆನಾವರಣ ಗೊಳ್ಳಲಿ ಎಂದು ತಿಳಿಸಿದರು. ಒಟ್ಟು 24 ವಿದ್ಯಾ ಸಂಸ್ಥೆಯಿಂದ 420ವಿದ್ಯಾರ್ಥಿಗಳು ಬಾಗವಹಿಸಿದ್ದು ಪ್ರಥಮ ಸಮಗ್ರ ಪ್ರಶಸ್ತಿಯನ್ನು ರಾಮಕುಂಜೇಶ್ವರ ಪ್ರೌಢ ಶಾಲೆ ಕನ್ನಡ ಮಾಧ್ಯಮ, ದ್ವಿತೀಯಾ ಪ್ರಶಸ್ತಿಯನ್ನು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢ ಶಾಲೆ ಪಡೆದಿದ್ದು, ಕಲೋತ್ಸವದಲ್ಲಿ ಕನ್ನಯ್ಯ ಜ್ಯೋತಿ ಆಂಗ್ಲಮಾಧ್ಯಮ ಪ್ರೌಢ ಶಾಲೆ, ಸೈಂಟ್ ಆನ್ಸ್ ಪ್ರೌಢ ಶಾಲೆ ಪ್ರಥಮ ಪ್ರಶಸ್ತಿ ಪಡೆದಿದ್ದು, ದ್ವಿತೀಯಾ ಪ್ರಶಸ್ತಿಯನ್ನು ಗೋಪಾಲಕೃಷ್ಣ ಪ್ರೌಢ ಶಾಲೆ ಬಿಳಿನೆಲೆ, ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ಪಡೆದಿರುತ್ತಾರೆ.

ಸಮಾರೋಪ ಸಮಾರಂಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ತಾರಾ ತಿಮ್ಮಪ್ಪ ಪೂಜಾರಿ, ಆಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸದಾನಂದ ಆಚಾರ್ಯ, ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಕಾರ್ಯದರ್ಶಿ ಈಶ್ವರ ಗೌಡ ಪಜ್ಜಡ್ಕ, ಸದಸ್ಯ ಮುತ್ತಪ್ಪ ಪೂಜಾರಿ ನೈಯಲ್ಗ, ನೋಡೆಲ್ ಅಧಿಕಾರಿ ಸತೀಶ್ ಭಟ್, ಸಿಅರ್‌ಪಿ ಪ್ರದೀಪ್ ಬಾಕಿಲ ಬಹುಮಾನವನ್ನು ವಿತರಿಸಿದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಮುಖ್ಯ ಗುರುಗಳಾದ ಸತ್ಯನಾರಾಯಣ ಭಟ್ ಸ್ವಾಗತಿಸಿ ಪ್ರಾಂಶುಪಾಲರಾದ ನವೀನ್ ರೈ ಧನ್ಯವಾದ ಸಮರ್ಪಿಸಿದರು. ಶಾಲಾ ಭೋದಕ ಭೋಧಕೇತರ ವರ್ಗದವರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಅಚ್ಚುಕಟ್ಟಾದ ವೇದಿಕೆಯನ್ನು ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಡೀಕಯ್ಯ ಮತ್ತು ಹೇಮಂತ್ ನಿರ್ಮಿಸಿದರು. ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಹಾಗೂ ಊರವರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.