Home_Page_Advt
Home_Page_Advt
Home_Page_Advt
Home_Page_Advt
Breaking News

ನೆಲ್ಯಾಡಿ: ಸಾಫಿಯೆನ್‌ಶಿಯಾ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ನೆಲ್ಯಾಡಿ ಸಾಫಿಯೆನ್‌ಶಿಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರ್‍ಯಾಗಿಂಗ್, ಮಾದಕ ವಸ್ತುಗಳ ಸೇವೆನೆ, ಲೈಂಗಿಕ ದೌರ್ಜನ್ಯದಿಂದ ಆಗುವ ತೊಂದರೆ ಹಾಗೂ ಇದಕ್ಕೆ ಸಂಬಂಧಿಸಿದ ಕಾನೂನು ಸಲಹೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಪುತ್ತೂರು ಉಪವಿಭಾಗದ ಡಿವೈಎಸ್‌ಪಿ ದಿನಕರ ಶೆಟ್ಟಿಯವರು ಕಾರ್ಯಾಗಾರ ಉದ್ಘಾಟಿಸಿ ಮಾಹಿತಿ ನೀಡಿದರು. ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಡಾ| ಶ್ರೀಶ ಕುಮಾರ್‌ರವರು ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ರೆ| ಡಾ| ಫಾ| ವರ್ಗೀಸ್ ಕೈಪನಡುಕ್ಕ ಒಐಸಿಯವರು ಅಧ್ಯಕ್ಷತೆ ವಹಿಸಿದ್ದರು. ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರೆ|ಫಾ| ಮ್ಯಾಥ್ಯೂ ಪ್ರಫುಲ್ ಒಐಸಿ, ಉಪ ಪ್ರಾಂಶುಪಾಲೆ ಗೀತಾ ವಿನಯ್, ಸಂಯೋಜಕ ಕೃಷ್ಣಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೀದಿಶಾ ವಂದಿಸಿದರು. ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ಜಿಲ್‌ಶಿತಾ ಮತ್ತು ಬಳಗ ಪ್ರಾರ್ಥಿಸಿದರು. ಬೇರೆ ಬೇರೆ ಕಾಲೇಜಿನ ಹಲವು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.