Home_Page_Advt
Home_Page_Advt
Home_Page_Advt
Home_Page_Advt
Breaking News

ತಾಲೂಕು ಮಟ್ಟದ ಪ.ಪೂ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

  • ಬಾಲಕರ ವಿಭಾಗದಲ್ಲಿ ವಿವೇಕಾನಂದ ಪ.ಪೂ.ಕಾಲೇಜು,ಬಾಲಕಿಯರ ವಿಭಾಗದಲ್ಲಿ ಶ್ರೀಕೃಷ್ಣ ಪ.ಪೂ.ಕಾಲೇಜು ಪಟ್ಟೆ ಪ್ರಥಮ

ನೆಲ್ಯಾಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಹಾಗೂ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ನೆಲ್ಯಾಡಿ ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಮಟ್ಟದ ಬಾಲಕ, ಬಾಲಕಿಯರ ತ್ರೋಬಾಲ್ ಪಂದ್ಯಾಟ ಸೆ.11ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.

ಪಂದ್ಯಾಟವನ್ನು ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆಯವರು ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೀಪ ಹಾಗೂ ಎಣ್ಣೆ ತನ್ನನ್ನು ತಾನೇ ದಹಿಸಿಕೊಂಡು ಬೆಳಕು ನೀಡುವಂತೆ ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮ ಹಾಗೂ ನಿಶ್ಚಿತ ಗುರಿಯೊಂದಿಗೆ ಸಾಧನೆ ಮಾಡದಾಗ ಜೀವನದಲ್ಲಿ ಯಶಸ್ಸು ಸಿಗಲಿದೆ. ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಧ್ಯೇಯವಾಕ್ಯದಂತೆ ಪರಿಶ್ರಮಿಸಿ, ಪ್ರಾರ್ಥಿಸಿ, ಪ್ರಕಾಶಿಸುವಂತೆ ಆಗಬೇಕು. ಸರಕಾರದ ಅನುದಾನದ ಕೊರತೆ ಇದ್ದರೂ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆ ತಾಲೂಕು ಮಟ್ಟದ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ನೆಲ್ಯಾಡಿಯಲ್ಲಿ ಈ ವಿದ್ಯಾಸಂಸ್ಥೆ ಇನ್ನಷ್ಟೂ ಎತ್ತರಕ್ಕೆ ಬೆಳೆದು ಊರಿಗೆ ಬೆಳಕು ನೀಡಲಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯೊಂದಿಗೆ ಆಟವಾಡಿ ಎಂದು ಹೇಳಿ ಶುಭಹಾರೈಸಿದರು. ಕ್ರೀಡಾ ಸಂಯೋಜಕ ಪುನೀತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಎಂ.ಕೆ.ಎಲಿಯಾಸ್‌ರವರು ಸ್ವಾಗತಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.

ಸಮಾರೋಪ:
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ನೆಲ್ಯಾಡಿ ಗ್ರಾ.ಪಂ.ಸದಸ್ಯ ಕೆ.ಪಿ.ಅಬ್ರಹಾಂರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಸಂತ ಜಾರ್ಜ್ ಪ.ಪೂ.ಕಾಲೇಜಿನ ಪ್ರಾಂಶುಪಾಲ ಎಂ.ಕೆ.ಎಲಿಯಾಸ್, ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕಿ ಸರೋಜಕುಮಾರಿ, ಪ್ರೌಢಶಾಲಾ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕ ಹರಿಪ್ರಸಾದ್, ದೈಹಿಕ ಶಿಕ್ಷಣ ಶಿಕ್ಷಕ ಮಹಮ್ಮದ್ ಹ್ಯಾರಿಸ್, ನಿವೃತ್ತ ಮುಖ್ಯ ಶಿಕ್ಷಕ ವೆಂಕಟ್ರಮಣ ಆರ್.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಚೇತನ್ ಆನೆಗುಂಡಿ ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು.

ಬಾಲಕರ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಪ.ಪೂ.ಕಾಲೇಜು ತಂಡ ಪ್ರಥಮ ಹಾಗೂ ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಶ್ರೀಕೃಷ್ಣ ಪ.ಪೂ.ಕಾಲೇಜು ಪಟ್ಟೆ ಪ್ರಥಮ ಹಾಗಗೂ ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ 7 ಹಾಗೂ ಬಾಲಕಿಯರ ವಿಭಾಗದಲ್ಲಿ 9 ತಂಡಗಳು ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದವು.

ಕಾರ್ಯಕ್ರಮದ ಉದ್ಘಾಟನೆಯನ್ನು ಗಂಗಾಧರ್ ಶೆಟ್ಟಿ ನೆರವೇರಿಸದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ರಹಾಂ ವರ್ಗೀಸ್ ವಹಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಎಂ .ಕೆ ಎಲಿಯಾಸ್, ಕ್ರೀಡಾ ನಿರ್ವಾಹಕ ಪುನೀತ್ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.