ಸೆ.15: ರಾಮಕುಂಜದಲ್ಲಿ ಉಚಿತ ವೈದ್ಯಕೀಯ ಶಿಬಿರ

Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪದವಿ ಪೂರ್ವ ಕಾಲೇಜು, ಕನ್ನಡ ಮಾಧ್ಯಮ ವಿಭಾಗದ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ, ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ಸೆ.15ರಂದು ವೈದ್ಯಕೀಯ ಉಚಿತ ಶಿಬಿರ ಕಾಲೇಜಿನಲ್ಲಿ ನಡೆಯಲಿದೆ.

ಶಿಬಿರದಲ್ಲಿ ಜನರಲ್ ಮೆಡಿಸಿನ್, ಮಕ್ಕಳ ರೋಗ, ಕಿವಿ, ಮೂಗು, ಗಂಟಲು, ನೇತ್ರಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಸ್ತ್ರೀ ರೋಗ, ಮೂಳೆ, ದಂತ ಮೊದಲಾದ ವಿಭಾಗದ ತಜ್ಞ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸಲಹೆ ನೀಡಲಾಗುವುದು. ಹೆಚ್ಚಿನ ಶಸ್ತ್ರಚಿಕಿತ್ಸೆ ಅಗತ್ಯವಿದ್ದಲ್ಲಿ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಯ ಮುಂದುವರಿಕಾ ಕಾರ್ಡುಗಳನ್ನು ನೀಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.