Home_Page_Advt
Home_Page_Advt
Home_Page_Advt
Breaking News

ಬಜತ್ತೂರು ಗ್ರಾ.ಪಂ.: ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ

 
ಉಪ್ಪಿನಂಗಡಿ: ಬಜತ್ತೂರು ಗ್ರಾ.ಪಂ.ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಸೆ.17ರಂದು ಬಜತ್ತೂರು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್‌ಕುಮಾರ್‌ರವರು ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಹಾಗೂ ಸಾರ್ವಜನಿಕ ಕಾಮಗಾರಿ ನಿರ್ವಹಣೆ ಸಾಧ್ಯವಿದೆ. ರಸ್ತೆ, ಜಲಮರುಪೂರಣ, ಶಾಲೆಗಳಿಗೆ ಆವರಣ ಗೋಡೆ ರಚನೆ, ಕಟ್ಟಡ, ಕೈತೋಟ ರಚನೆಯೂ ಉದ್ಯೋಗ ಖಾತ್ರಿ ಯೋಜನೆಯಡಿ ಮಾಡಲು ಸಾಧ್ಯವಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು. ವೈಯಕ್ತಿಕ ಅಭಿವೃದ್ಧಿಯೊಂದಿಗೆ ಗ್ರಾಮದ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆಯನ್ನು ಹೆಚ್ಚಾಗಿ ಬಳಸಿಕೊಳ್ಳಬೇಕೆಂದು ಹೇಳಿದರು. ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್‌ರವರು ಮಾತನಾಡಿ, ಗ್ರಾ.ಪಂ.ಗೆ ಸರಕಾರದಿಂದ ಹೆಚ್ಚಿನ ಅನುದಾನ ಬರುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ ಅತೀ ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಮಾಡಲು ಸಾಧ್ಯವಿದೆ. 2019-20ನೇ ಸಾಲಿನ ಪ್ರಥಮ ಹಂತದಲ್ಲಿ ಗ್ರಾಮಸ್ಥರ ಸಹಕಾರದಿಂದ 31 ಲಕ್ಷ ಮೊತ್ತದ ಕಾಮಗಾರಿ ನಡೆದಿದೆ. ಗ್ರಾ.ಪಂ.ಗೆ ೫ ಕಿಂಡಿ ಅಣೆಕಟ್ಟು ನಿರ್ಮಾಣದ ಟಾರ್ಗೆಟ್ ನೀಡಲಾಗಿತ್ತು. ಆದರೆ 1 ಕಿಂಡಿ ಅಣೆಕಟ್ಟು ಮಾತ್ರ ನಿರ್ಮಾಣ ಸಾಧ್ಯವಾಗಿದೆ. ಕಿಂಡಿ ಅಣೆಕಟ್ಟು ರಚನೆಗೆ ನರೇಗಾ ಯೋಜನೆಯ ಫಲಾನುಭವಿಗಳು ಒತ್ತು ನೀಡಬೇಕು. ನರೇಗಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮುಂದೆ ಹಿಂದೂ ರುದ್ರಭೂಮಿಯ ಕಟ್ಟಡ ಕಾಮಗಾರಿ ಮಾಡಲಾಗುವುದು ಎಂದರು. ಗ್ರಾ.ಪಂ.ಉಪಾಧ್ಯಕ್ಷೆ ಸುಜಾತ ಎನ್.,ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಿಡಿಒ ಪ್ರವೀಣ್ ಕುಮಾರ್‌ರವರು ಸ್ವಾಗತಿಸಿ, ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿ ರಮೇಶ್ ಪೂಜಾರಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯರುಗಳಾದ ಪ್ರೆಸಿಲ್ಲಾ ಡಿ.ಸೋಜ, ಶಶಿತ, ಲೀಲಾವತಿ, ಮಾಧವ ಪೂಜಾರಿ, ಗಣೇಶ್ ಕೆ., ತೇಜಕುಮಾರಿ, ರಾಜೇಶ್ ಕುಮಾರ್, ಆನಂದ ಕೆ.ಎಸ್., ಯೋಜನೆಯ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಜಯಮಣಿ, ಸುಪ್ರಿಯ, ಶ್ವೇತಾಕ್ಷಿಯವರು ಸಭೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ರಮೇಶ, ವಿ.ಕೆ.ಮಹಮ್ಮದ್, ಮಮತಾ, ಮೀನಾಕ್ಷಿ ಸಹಕರಿಸಿದರು.

31 ಲಕ್ಷ ರೂ.ಖರ್ಚು
2018ರ ಅ.೧ರಿಂದ 2019ರ ಮಾ.31ರ ತನಕದ ಪ್ರಥಮ ಹಂತದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯತ್‌ನಲ್ಲಿ ಒಟ್ಟು 31,00,573 ರೂ.ವೆಚ್ಚ ಮಾಡಲಾಗಿದೆ. ಈ ಅವಧಿಯಲ್ಲಿ ಒಟ್ಟು 104ಕಾಮಗಾರಿಗಳು ಅನುಷ್ಠಾನಗೊಂಡಿದ್ದು16,57,842 ರೂ.ಕೂಲಿಮೊತ್ತ ಹಾಗೂ 14,42,731 ರೂ.,ಸಾಮಾಗ್ರಿ ಮೊತ್ತ ಪಾವತಿಯಾಗಿದೆ. 146 ಕುಟುಂಬಗಳ 281 ಮಂದಿ ಕೆಲಸ ಮಾಡಿದ್ದು ೬೬೫೮ ಮಾನವ ದಿನ ಸೃಜನೆಯಾಗಿದೆ ಎಂದು ಲೆಕ್ಕ ಪರಿಶೋಧನೆ ನಡೆಸಿದ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.