Home_Page_Advt
Home_Page_Advt
Home_Page_Advt
Breaking News

ಪುತ್ತೂರು ಮೊಸರು ಕುಡಿಕೆ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ ಆರೋಪ: ರಘು ಸಕಲೇಶಪುರ, ಸುಭಾಷ್ ರೈ, ಜನಾರ್ದನ ಬೆಟ್ಟ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ವಿಶ್ವಹಿಂದು ಪರಿಷದ್ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ಆ.31ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯ ದಿಕ್ಸೂಚಿ ಭಾಷಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ರಘು ಸಕಲೇಶಪುರ, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕಡಮಜಲು ಸುಭಾಷ್ ರೈ, ವಿ.ಹಿಂ.ಪ ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರ್ಮಿಕ ಭಾಷಣದಲ್ಲಿ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಎಂದು ಮುಸಲ್ಮಾನರು ಹೇಳದಿದ್ದಲ್ಲಿ ಈ ದೇಶದ ಯಾವುದೇ ಮೂಲೆಯಲ್ಲೂ ಮುಸಲ್ಮಾನರಿಗೆ ನಮಾಜು ನಿರ್ವಹಿಸಲು ಒಂದು ಅಡಿ ಜಾಗವನ್ನು ನೀಡಲಾಗುವುದಿಲ್ಲ ಎಂದು ಹೇಳಿಸಿರುತ್ತಾರೆ. ಸಹೋದರತೆಯಿಂದ ಬಾಳುತ್ತಿರುವ ಹಿಂದೂ ಮತ್ತು ಮುಸಲ್ಮಾನರ ನಡುವೆ ವೈಷಮ್ಯವನ್ನು ಹುಟ್ಟು ಹಾಕಿ ಕೋಮು ಗಲಭೆಯನ್ನು ಮಾಡಬೇಕೆಂಬ ಉದ್ದೇಶದಿಂದ ಈ ಹೇಳಿಕೆಯನ್ನು ನೀಡಿಸಿರುತ್ತಾರೆ. ಮತ್ತು ಈ ರೀತಿಯ ಹೇಳಿಕೆಯಿಂದಾಗಿ ಮುಸಲ್ಮಾನರ ಭಾವನೆಗಳನ್ನು ಕೆರಳಿಸುವಂತಹ ಕೆಲಸವನ್ನು ಮಾಡಿಸಿರುತ್ತಾರೆ. ಮತ್ತು ಸದ್ರಿ ಮೊಸರು ಕುಡಿಕೆ ಕಾರ್ಯಕ್ರಮವನ್ನು ಕೇವಲ ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಉದ್ದೇಶ ಇಟ್ಟುಕೊಂಡು ಮಾಡಿರುವುದು, ಮತ್ತು ಈ ಹೇಳಿಕೆ ಕೊಟ್ಟಂತಹ ಎಲ್ಲಾ ಎದ್ರಿದಾರರುಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿಯೂ ಇನ್ನು ಮುಂದೆ ಇಂತಹ ಹೇಳಿಕೆ ನೀಡದಂತೆ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಕೂರ್ನಡ್ಕ ನಿವಾಸಿ ಅಬ್ಬಾಸ್ ಪಿ. ಎಂಬವರ ಪುತ್ರ ಪಿಎಫ್‌ಐ ಪುತ್ತೂರು ನಗರ ಸಮಿತಿ ಸದಸ್ಯ ಸಿರಾಜುದ್ದೀನ್ ಅವರು ಸೆ.೫ರಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ನೀಡಿದ ದೂರನ್ನು ಸ್ವೀಕರಿಸಿದ ಪೊಲೀಸರು ದೂರಿನಲ್ಲಿ ಕೋಮು ಪ್ರಚೋದನಾಕಾರಿಯಾಗಿ ಮಾತನಾಡಿದ ಹೇಳಿಕೆಗಳು ಇವೆಯೇ ಹಾಗೂ ಈ ಹೇಳಿಕೆಯಲ್ಲಿ ಸಮಾಜದಲ್ಲಿ ಶಾಂತಿ ಭಂಗ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಅಂಶಗಳು ಇದೆಯೇ ಎಂಬ ಬಗ್ಗೆ ಕಾನೂನು ತಜ್ಞರಿಂದ ಅವಲೋಕಿಸಿ ಸಲಹೆ ಪಡೆದು ಆರೋಪಿಗಳ ವಿರುದ್ಧ ಕಲಂ ಭಾರತೀಯ ದಂಡ ಸಂಹಿತೆಯಂತೆ ಸೆಕ್ಷನ್ ೧೫೩ (ಎ) ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.