ನಗದುರಹಿತ ವ್ಯವಹಾರದ ಉತ್ತೇಜನಕ್ಕೆ ಹೊಸಕ್ರಮ- ಸದಸ್ಯರಿಗೆ ಹಣ ಪಾವತಿ ವಿಳಂಬಕ್ಕೆ ವಿಷಾದಿಸಿದ ಕಾಂಪ್ಕೋ ಅಧ್ಯಕ್ಷರು

Puttur_Advt_NewsUnder_1
Puttur_Advt_NewsUnder_1

ವರದಿ: ಸುನೀಲ್ ಎನ್. ಕಾವು

ಶೀಘ್ರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ:
ಹಣ ಜಮಾವಣೆಯಲ್ಲಿ ಬ್ಯಾಂಕ್‌ನಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ಶೀಘ್ರ ಸರಿಪಡಿಸುವ ನಿಟ್ಟಿನಲ್ಲಿ ಸಂಸ್ಥೆಯು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮಸ್ಯೆಯ ಬಗ್ಗೆ ಮಾತುಕತೆ ನಡೆಸಿದಾಗ ಶೀಘ್ರದಲ್ಲಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವ ಭರವಸೆಯನ್ನು ಬ್ಯಾಂಕ್ ಅಧಿಕಾರಿಗಳು ನೀಡಿದ್ದಾರೆ – ಎಸ್.ಆರ್ ಸತೀಶ್ಚಂದ್ರ, ಕ್ಯಾಂಪ್ಕೊ ಅಧ್ಯಕ್ಷರು

ಪುತ್ತೂರು: ನಗದುರಹಿತ ವ್ಯವಹಾರಗಳನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರಕಾರವು ತಂದಿರುವ ಹೊಸ ನಿಯಮಗಳನ್ನು ಕ್ಯಾಂಪ್ಕೊ ಸಂಸ್ಥೆಯು ಜಾರಿಗೆ ತಂದಿದ್ದು, ಅದರಂತೆ ಸದಸ್ಯ ಬೆಳೆಗಾರರಿಗೆ ಅಡಿಕೆ ಖರೀದಿ ಮೇಲಿನ ಬಿಲ್ ಪಾವತಿಯನ್ನು ಬ್ಯಾಂಕಿಂಗ್ ವ್ಯವಸ್ಥೆಯ ಚೆಕ್/ನೆಫ್ಟ್ ಮೂಲಕ ಮಾಡುತ್ತಿದೆ. ಆದರೆ ಕಳೆದ ಕೆಲ ದಿನಗಳಿಂದ ಸದಸ್ಯರ ಖಾತೆಗಳಿಗೆ ಹಣದ ಜಮಾವಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಚರ್ಚೆಯಾಗುತ್ತಿರುವುದನ್ನು ಗಮನಿಸಿದ ಕ್ಯಾಂಪ್ಕೊ ಸಂಸ್ಥೆಯು ಸಮಸ್ಯೆ ಬಗ್ಗೆ ಬ್ಯಾಂಕ್‌ನಲ್ಲಿ ವಿಚಾರಿಸಿದಾಗ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದ ಕಾರಣದಿಂದ ಹಣ ಜಮಾವಣೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿದು ಬಂದಿದೆ, ಸದಸ್ಯರಿಗೆ ಸಕಾಲಕ್ಕೆ ಹಣ ಜಮಾವಣೆಯಲ್ಲಿ ವ್ಯತ್ಯಯ ಉಂಟಾಗಿ ಸಮಸ್ಯೆಯಾದುದಕ್ಕಾಗಿ ಸಂಸ್ಥೆಯು ವಿಷಾದ ವ್ಯಕ್ತಪಡಿಸುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.