Home_Page_Advt
Home_Page_Advt
Home_Page_Advt
Breaking News

ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ


ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಸಾಂಸ್ಕೃತಿಕ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ನ್ಯಾಯಾಧೀಶರಾದ ರುಡಾಲ್ಫ್ ಪಿರೇರಾ ಮಾತನಾಡಿ, ಕಾನೂನು ವಿದ್ಯಾರ್ಥಿಗಳಲ್ಲಿ ಅಧ್ಯಯ ಮಾತೃವಲ್ಲದೆ ನಾಯಕತ್ವದ ಗುಣ, ಪಠ್ಯೇತರ ಗುಣಗಳು ಮೈಗೂಡಿಸಿಕೊಳ್ಳಬೇಕು ಹಾಗೂ ಕಾನೂನು ಕ್ಷೇತ್ರದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದು ಆಶಿಸಿದರು. ಮಂಜುಳಾ ಸುಬ್ರಹ್ಮಣ್ಯ ಮಾತನಾಡಿ, ಒಬ್ಬ ವ್ಯಕ್ತಿಯ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಲು, ತನ್ನನ್ನು ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಿದೆ ಎಂದು ಹೇಳಿದರು. ಕಾನೂನು ಕಾಲೇಜಿನ ಸಂಚಾಲಕರಾದ ವಿಜಯನಾರಾಯಣ ಕೆ. ಎಂ ಮಾತನಾಡಿ, ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆಯನ್ನು ರೂಪಿಸುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸಹಕಾರಿ ಆಗುತ್ತದೆ ಎಂದು ಹೇಳಿದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಜೋಷಿ ಬಿ. ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿ ಸಂಘಕ್ಕೆ ಶುಭಹಾರೈಸಿದರು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ, ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ಮತ್ತು ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಕುಮಾರಿ ಅಂಕಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾನೂನು ಕಾಲೇಜಿನ ಉಪನ್ಯಾಸಕಿ ಸಂಗೀತಾ ಎಸ್. ಎಂ. ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದರ್ಶನ್ ಸ್ವಾಗತಿಸಿ, ಕಾರ್ಯದರ್ಶಿ ಅನಿಲ್ ಕುಮಾರ್ ಕೆ. ವಂದಿಸಿದರು. ವಿದ್ಯಾರ್ಥಿನಿಯರಾದ ಕಾವೇರಮ್ಮ ಮತ್ತು ಸುಶ್ಮಿತಾ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.