ಫಿಲೋಮಿನಾ ಕಾಲೇಜಿನ ಶ್ರೀದೇವಿ ಅಂತರ್ ಕಾಲೇಜು ಭಾಷಣ ಸ್ಪರ್ಧೆಯಲ್ಲಿ ಪ್ರಥಮ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ೧೬೫ ನೇ ಜನ್ಮ ದಿನಚರಣೆ ಪ್ರಯುಕ್ತ ಮಂಗಳೂರಿನ  ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಸೆ. 13 ರಂದು ನಡೆದ ಅಂತರ್ಕಾಲೇಜು ಮಟ್ಟದ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಬಿಕಾಮ್ ವಿದ್ಯಾರ್ಥಿನಿ ಶ್ರೀದೇವಿ ಕೆ ಪ್ರಥಮ ಸ್ಥಾನ ಗಳಿಸಿ, ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದಾರೆ.

ಇವರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ) ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ೧೬೫ ನೇ ಜನ್ಮ ದಿನಚರಣೆ ಪ್ರಯುಕ್ತ ಪುತ್ತೂರು ತಾಲೂಕಿನ ಕಾಲೇಜು ವಿದ್ಯಾರ್ಥಿಗಳಿಗಾಗಿ ಸೆ. 7 ರಂದು ಪುತ್ತೂರಿನಲ್ಲಿ ಜರಗಿದ ಕನ್ನಡ ಭಾಷಣ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿ, ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದಾರೆ. ಇವರು ಕಲ್ಲಾರೆ ನಿವಾಸಿ ಮಹಾಬಲ ಭಟ್ ಮತ್ತು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೇಮಲತಾ ಕೆ ದಂಪತಿಗಳ ಸುಪುತ್ರಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.