ಅ.10: ಪುತ್ತೂರು ದಸರಾ ಮಹೋತ್ಸವದ ಶೋಭಾಯಾತ್ರೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಮೈಸೂರು, ಮಂಗಳೂರು ದಸರಾ ಮಹೋತ್ಸವದ ನಡುವೆ ಪುತ್ತೂರಿನಲ್ಲಿ ನಡೆಯುವ 17ನೇ ವರ್ಷದ ಪುತ್ತೂರು ದಸರಾ ಮಹೋತ್ಸವ ಅ.10ರಂದು ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಳ್ಳಲಿದೆ.

ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ ಪೂಜಿಸಲ್ಪಡುತ್ತಿರುವ ಗಣಪತಿ, ಶಾರದೆ ಸಹಿತ ನವದುರ್ಗೆಯರ ವಿಗ್ರಹದ ಶೋಭಾಯಾತ್ರೆಯ ಉದ್ಘಾಟನೆ ಸಂಜೆ ನಡೆಯಲಿದೆ. ಬೆಳಿಗ್ಗೆ ಗಂಟೆ 8ರಿಂದ ಚಂಡಿಕಾ ಹೋಮ ಆರಂಭಗೊಳ್ಳಲಿದೆ.

ಇದೇ ಸಂದರ್ಭದಲ್ಲಿ ಮಹಿಳೆಯರಿಂದ ಸಾಮೂಹಿಕ ಲಲಿತ ಸಹಸ್ರನಾಮ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ. ಸಂಜೆ ಪುತ್ತೂರು ದಸರಾ ಮೆರವಣಿಗೆ ಆರಂಭಗೊಳ್ಳಲಿದೆ. ಶೋಭಾಯಾತ್ರೆಯು ಸಂಪ್ಯ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಹೊರಟು ದರ್ಬೆ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿರುವ ಕೆರೆಯಲ್ಲಿ ಸಮಾಪನಗೊಳ್ಳಲಿದೆ ಎಂದು ಪುತ್ತೂರು ದಸರಾ ಮಹೋತ್ಸವ ಸಮಿತಿ ತಿಳಿಸಿದೆ.

ಚಂಡಿಕಾ ಹೋಮ ಸೇವೆ ಭಕ್ತರಿಗೆ ಸೀರೆ ಪ್ರಸಾದ
ಚಂಡಿಕಾ ಹೋಮ ಸೇವೆ ಮಾಡಿಸಿದ ಭಕ್ತರಿಗೆ ಹೋಮದ ಪ್ರಸಾದದೊಂದಿಗೆ ಸೀರೆಯನ್ನು ಪ್ರಸಾದ ರೂಪದಲ್ಲಿ ವಿತರಣೆ ಮಾಡಾಗುವುದು ಎಂದು ಪುತ್ತೂರು ದಸರಾ ಮಹೋತ್ಸವ ಸಮಿತಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.