Home_Page_Advt
Home_Page_Advt
Home_Page_Advt
Breaking News

ಕೆಯ್ಯೂರು ಶ್ರೀಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಂಭ್ರಮದ ಸಮಾರೋಪ

  • ಶ್ರದ್ಧೆ,ಭಕ್ತಿ,ನಂಬಿಕೆ ಇದ್ದಾಗ ಸಂಸ್ಕಾರಯುತ ಬದುಕು ನಮ್ಮದಾಗಲು ಸಾಧ್ಯ-ಸತೀಶ್ ಶೆಟ್ಟಿ

ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ.೨೮ ರಿಂದ ಅ.೮ ರತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ಜರಗಿದ ನವರಾತ್ರಿ ಉತ್ಸವದ ಸಮಾರೋಪ ಸಮಾರಂಭ ಅ.೭ ರಂದು ನಡೆಯಿತು. ಶ್ರೀ ಕ್ಷೇತ್ರದ ಮಾಜಿ ಮೊಕ್ತೇಸರ ಶಶಿಧರ್ ರಾವ್ ಬೊಳಿಕ್ಕಲರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೆಟ್ಟದ್ದನ್ನು ದೂರಮಾಡಿ ಒಳ್ಳೆಯ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ನವರಾತ್ರಿ ನಮಗೆ ಬಹಳಷ್ಟು ಸಂದೇಶಗಳನ್ನು ಕೊಡುತ್ತದೆ. ದುರ್ಗೆಯ ಆರಾಧನೆಯೊಂದಿಗೆ ಉತ್ತಮ ವಿಚಾರಗಳನ್ನು ತಿಳಿದುಕೊಳ್ಳಲು ಇದು ಸಕಾಲ. ನವದುರ್ಗೆಯರು ನಮೆಗೆಲ್ಲರಿಗೂ ಒಳ್ಳೆಯದನ್ನು ಕರುಣಿಸಲಿ ಎಂದು ಹೇಳಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ದ.ಕ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿ, ಭಗವಂತ ಭೂಮಿಗೆ ಜನನ ಕೊಟ್ಟಾಗ ನಮಗೆ ಯಾವುದೇ ವಿಚಾರ ತಿಳಿದಿರುವುದಿಲ್ಲ ಆದರೆ ಮುಂದೆ ಪ್ರಪಂಚದ ಅನುಭವ ನಮೆಗೆ ಎಲ್ಲವನ್ನೂ ಕಲಿಸುತ್ತದೆ. ಇದೆಲ್ಲವೂ ಭಗವಂತನ ಕೃಪೆ ಆಗಿದೆ. ಶ್ರದ್ಧೆ, ಭಕ್ತಿ, ನಂಬಿಕೆಯಿಂದ ದೇವರ ಆರಾಧನೆ ಮಾಡಿದಾಗ ಜೀವನದಲ್ಲಿ ಯಶಸ್ಸು ಸಿಗಲು ಸಾಧ್ಯವಿದೆ. ಸಂಸ್ಕಾರಯುತ ಬದುಕು ನಮ್ಮದಾಗಬೇಕಾದರೆ ನಮ್ಮಲ್ಲಿ ಶ್ರದ್ಧೆ, ಭಕ್ತಿ ಮತ್ತು ನಂಬಿಕೆ ಬೇಕು.ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಪಾವನವಾಗಲು ಸಾಧ್ಯವಿದೆ ಎಂದು ಹೇಳಿ ಶುಭ ಹಾರೈಸಿದರು.

ಕೆಯ್ಯೂರು ಗ್ರಾಪಂ ಅಧ್ಯಕ್ಷ ಬಾಬು.ಬಿ, ಸದಸ್ಯ ಎ.ಕೆ ಜಯರಾಮ ರೈ, ತಾಪಂ ಸದಸ್ಯೆ ಭವಾನಿ ಚಿದಾನಂದ್, ಡಾ. ಹರ್ಷ ಕುಮಾರ್ ಮಾಡಾವು, ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಅರ್ಚಕ ಸರ್ವೇಶ್ವರ ಭಟ್ ಕೈತಡ್ಕ, ವಿದ್ಯಾಮಾತ ಪೌಂಡೇಶನ್ ಬೆಂಗಳೂರು ಇದರ ಅಧ್ಯಕ್ಷ ಭಾಗ್ಯೇಶ್ ರೈರವರುಗಳು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ನವರಾತ್ರಿ ಉತ್ಸವ ಸಮಿತಿಯ ಉಪಾಧ್ಯಕ್ಷ ದಾಮೋದರ ಪೂಜಾರಿ ಕೆಂಗುಡೇಲು ಸ್ವಾಗತಿಸಿದರು. ಭಜನಾ ಮಂಡಳಿ ಕಾರ್ಯದರ್ಶಿ ರವಿ ಕುಮಾರ್ ಕೈತಡ್ಕ, ಉತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ರೈ ಇಳಂತಾಜೆ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಶರತ್ ಕುಮಾರ್ ಮಾಡಾವು ಹಾಗೂ ಸಮಿತಿ ಪದಾಧಿಕಾರಿಗಳು ಸಹಕರಿಸಿದ್ದರು.

ಮನರಂಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ
ಸಭಾ ಕಾರ್ಯಕ್ರಮದ ಬಳಿಕ ಪಾಪೆಮಜಲು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಯೋಗ ಗುಚ್ಛ ಮತ್ತು ಪೌರಾಣಿಕ ನಾಟಕ ನಡೆಯಿತು. ಸ್ಥಳೀಯ ಪ್ರತಿಭೆಗಳಾದ ಸಿಂಚನ ಸೀತಾರಾಮ ರೈ ಮತ್ತು ಶಾರ್ವಿ ಸೀತಾರಾಮ ರೈ ಕೋಡಂಬುರವರಿಂದ ನೃತ್ಯ ಕಾರ್ಯಕ್ರಮ ಮನರಂಜಿಸಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.