Home_Page_Advt
Home_Page_Advt
Home_Page_Advt
Breaking News

ವಿಟ್ಲಪಡ್ನೂರು ಗ್ರಾಮ ಪಂಚಾಯತ್‌ಗೆ ಗಾಂಧೀ ಗ್ರಾಮ ಪುರಸ್ಕಾರ


ಪುತ್ತೂರು: ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮ ಪಂಚಾಯತ್ 2018-19ನೇ ಸಾಲಿನ ಗಾಂಧೀ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಅ.2 ರಂದು ಬೆಂಗಳೂರಿನ ವಿಧಾನ ಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಜರಗಿದ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ ಶೆಟ್ಟಿ ಕರ್ಕಳ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ,. ಸುಜಯ ಕೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವರಿಂದ ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮೀಣ ಅಭಿವೃಧ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಒಟ್ಟು ಸಾಧನೆಯನ್ನು ಪರಿಗಣಿಸಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನೀಡಲಾಗುವ ಈ ಪುರಸ್ಕಾರವು ೫ ಲಕ್ಷ ನಗದು,ಪ್ರಮಾಣ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಧಾ ಎಸ್ ಶೆಟ್ಟಿ ಸದಸ್ಯರಾದ ನಾಗೇಶ್ ಕುಮಾರ್, ಜಯಂತ ಪಿ ಹಾಜರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.