ಜೋಸ್ ಆಲುಕ್ಕಾಸ್ ನ 55ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಅಂತರಾಷ್ಟ್ರೀಯ ಖ್ಯಾತಿಯ ಚಿನ್ನಾಭರಣ ಮಳಿಗೆ ಜೋಸ್ ಅಲುಕ್ಕಾಸ್ ಸಂಸ್ಥೆಯ 55ನೇ ವಾರ್ಷಿಕೋತ್ಸವದ ಪ್ರಯುಕ್ತ  ಜೋಸ್ ಆಲುಕ್ಕಾಸ್ ಜ್ಯವೆಲ್ಲರಿ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿ ಇದರ ಜಂಟಿ ಸಹಭಾಗಿತ್ವದಲ್ಲಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ಲು ಮಂಗಳೂರು ಇದರ ಸಹಕಾರದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಯ ವಠಾರದಲ್ಲಿ  ಅ.26ರಂದು  ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಅಬ್ದುಲ್ ರಹಿಮಾನ್ ರವರು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ, ರೋಟರಿ ಕ್ಲಬ್ ಪುತ್ತೂರು ಸಿಟಿಯ ಅಧ್ಯಕ್ಷರಾದ ದರ್ಣಪ್ಪ ಗೌಡ, ನಿಕಟಪೂರ್ವ ಅಧ್ಯಕ್ಷರಾದ ಮನೋಹರ್ ಕೊಳಕ್ಕಿಮಾರ್, ಕಾರ್ಯದರ್ಶಿ ಸ್ವಾತಿ ಮಲ್ಲಾರ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ನೇತ್ರತಜ್ಞರಾದ ಭದ್ರಿನಾಥ್, ಜೋಸ್ ಆಲುಕ್ಕಾಸ್ ಸಂಸ್ಥೆಯ ಏರೀಯಾ ಮ್ಯಾನೇಜರ್ ಬಿಜು ಟಿ.ಎಲ್ ಮೊದಲಾದವರು ಉಪಸ್ಥಿತರಿದ್ದರು. ಪುತ್ತೂರು ಶಾಖಾ ವ್ಯವಸ್ಥಾಪಕರಾದ ರತೀಶ್ ಸಿ.ಪಿ ಸ್ವಾಗತಿಸಿ, ಅಕೌಂಟೆಂಟ್ ರಾಜೇಶ್ ಕಲಾಕಾರ್ ವಂದಿಸಿದರು. ಸಿಬಂಧಿಗಳಾದ ಸುಪ್ರಿಯಾ ಹಾಗೂ ಸುಶ್ಮಿತಾ ಪ್ರಾರ್ಥಿಸಿ, ರಾಕೇಶ್  ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.