Home_Page_Advt
Home_Page_Advt
Breaking News

4ನೇ ಬಾಲಶಲ್ಯ ಕ್ರಿಯಾ ಅಭಿಯಾನ ಯೋಜನೆ – ಸಾರ್ವಜನಿಕರು ಸದುಪಯೋಗ ಪಡೆಯುವಂತೆ ನಗರಸಭೆ ಸೂಚನೆ


ಪುತ್ತೂರು: 4ನೇ ಬಾಲಶಲ್ಯ ಕ್ರಿಯಾ ಅಭಿಯಾನ ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗಾಗಿ ಕೈಗೊಂಡ ಉಚಿತ ತಪಾಸಣಾ ಶಿಬಿರ ಮತ್ತು ಉಚಿತ ಶಸ್ತ್ರಚಿಕಿತ್ಸಾ ಕಾರ್ಯಕ್ರಮ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಜರುಗಲಿದ್ದು ಇದರ ಸದುಪಯೋಗ ಪಡೆಯುವಂತೆ ಪುತ್ತೂರು ನಗರ ಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದ್ದಾರೆ.

ಈಗಾಗಲೇ ಶಿಬಿರ ಆರಂಭಗೊಂಡಿದ್ದು ಪ್ರತಿ ಸೋಮವಾರದಿಂದ ಶುಕ್ರರವಾರ ಬೆಳಿಗ್ಗೆ ಗಂಟೆ 10 ರಿಂದ ಮಧ್ಯಾಹ್ನ ಗಂಟೆ 12.30ರ ತನಕ ನಡೆಯುವ ಶಿಬಿರ ಫೆಬ್ರವರಿ ತಿಂಗಳ ತನಕ ಜರುಗಲಿದೆ ಅನ್ನದಾಳದ ತೊಂದರೆಗಳು, ಮಲದ್ವಾರದ ವಿಕಲತೆ ಹಾಗೂ ಮಲಬದ್ಧತೆ ತೊಂದರೆಗಳು, ತಲೆ, ಕುತ್ತಿಗೆ, ಮೂತ್ರಕೋಶ, ಮೂಳೆಗಳ, ಜೀರ್ಣಾಂಗವ್ಯೂಹದ ತೊಂದರೆಗಳು ಹಾಗೂ ಎದೆಗೂಡು ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ಶಸ್ತ್ರಚಿಕಿತೆಗೆ ಸಂಬಂಧಿಸಿ ಶಿಬಿರದ ಪ್ರಯೋಜನ ಪಡೆದು ಕೊಳ್ಳಬಹುದು ಎಂದು ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.