Home_Page_Advt
Home_Page_Advt
Breaking News

ಡಿವೈಎಸ್‌ಪಿ ವಿಶೇಷ ತಂಡದ ಕಾರ್ಯಾಚರಣೆ -ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಪುತ್ತೂರು: ಸಾರ್ವಜನಿಕ ರಸ್ತೆಯಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡಲೆತ್ನಿಸುತ್ತಿದ್ದ ಆರೋಪಿಯನ್ನು ಡಿವೈಎಸ್‌ಪಿ ನೇತೃತ್ವದ ವಿಶೇಷ ಪೊಲೀಸರ ತಂಡ ನ.8ರಂದು ನೆಹರು ನಗರ ಎಂಬಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಅಳಿಕೆ ಸುಬ್ರಹ್ಮಣ್ಯ ದೇವಸ್ಥಾನ ಬಳಿಯ ಮೊಹಮ್ಮದ್‌ರವರ ಪುತ್ರ ವಿಟ್ಲ ಕಸ್ಬಾ ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಇರುವ ಮೊಹಮ್ಮದ್ ಹಾರಿಸ್ ಯಾನೆ ಹೌರಾ ಹಾರಿಸ್(36.ವ) ಬಂಧಿತ ಆರೋಪಿ. ನೆಹರು ನಗರದ ರೈಲ್ವೇ ಓವರ್ ಬ್ರಿಡ್ಜ್ ಬಳಿಯ ಒಂದನೇ ಅಡ್ಡ ರಸ್ತೆಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತ ಮೇರೆಗೆ ಡಿವೈಎಸ್‌ಪಿ ದಿನಕರ ಶೆಟ್ಟಿಯವರ ಮಾರ್ಗದರ್ಶನದ ವಿಶೇಷ ತಂಡ ನಗರ ಠಾಣಾ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಯಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಸುಮಾರು ರೂ.೩೦೦೦ ಮೌಲ್ಯದ ೧೨೦ ಗ್ರಾಂ ಗಾಂಜಾ ಪತ್ತೆಯಾಗಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣಗಳು ಆರೋಪಿಯ ಮೇಲೆ ದಾಖಲಾಗಿದೆ. ಡಿವೈಎಸ್ಪಿ ತಂಡದ ಎಎಸ್‌ಯ ಚಿದಾನಂದ, ಸಿಬಂದಿಗಳಾದ ಸ್ಕರಿಯ, ಜಯರಾಮ, ಜಗದೀಶ, ವಸಂತ, ರಕ್ಷಿತ್, ವಿನಯ, ಅದ್ರಾಮ, ದಾಮೋದರ, ಪ್ರೋಬೇಷನರಿ ಎಸ್‌ಐ ಆಂಜನೇಯ ರೆಡ್ಡಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.