Home_Page_Advt
Home_Page_Advt
Home_Page_Advt
Breaking News

ನ. 18 ಪುತ್ತೂರು ಬಂಟರ ಭವನದಲ್ಲಿ ಪ್ರಕಾಶಾಭಿನಂದನ 60ರ ಸಂಭ್ರಮದ ಪೂರ್ವಭಾವಿ ಸಭೆ


ಪುತ್ತೂರು: ಸಮಾಜ ಮುಖಿ ಚಿಂತಕ, ರಾಜೋತ್ಸವ ಪ್ರಶಸ್ತಿ ಭಾಜನರಾಗಿರುವ, ಪ್ರತಿಷ್ಠಿತ ಉದ್ಯಮಿ ಬೆಂಗಳೂರಿನ ಎಂಆರ್‌ಜಿ ಗ್ರೂಫ್‌ನ ಚೆಯರ್‌ಮ್ಯಾನ್ ಹಾಗೂ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿರವರರಿಗೆ ದ. 25ರಂದು ಮಂಗಳೂರಿನ ಬಂಗ್ರಕೂಳೂರಿನಲ್ಲಿರುವ ಗೋಲ್ಡ್‌ಪಿಂಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸನ್ಮಾನ” ಪ್ರಕಾಶಾಭಿನಂದನ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿ, ಪುತ್ತರು ತಾಲೂಕು ಬಂಟರ ಸಂಘ , ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಆಶ್ರಯದಲ್ಲಿ ನ. 18 ರಂದು ಸಂಜೆ 5 ಗಂಟೆಗೆ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಪೂರ್ವಭಾವಿ ಸಭೆಯು ನಡೆಯಲಿದ್ದು, ಈ ಸಭೆಯಲ್ಲಿ ಬಂಟ ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಂಟರ ಯಾನೆ ನಾಡವರ ಮಾತೃ ಸಂಘದ ಜೊತೆ ಕಾರ್‍ಯದರ್ಶಿ ಕಾವು ಹೇಮನಾಥ ಶೆಟ್ಟಿ, ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ತಾಲೂಕು ಬಂಟರ ಸಂಘದ ಅಧ್ಯಕ್ಷ ಅರಿಯಡ್ಕ ಲಕ್ಷ್ಮಿನಾರಾಯಣ ಶೆಟ್ಟಿರವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.