ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ನಗರ ಮಂಡಲದ ಅಧ್ಯಕ್ಷರಾಗಿ ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಆಯ್ಕೆಗೊಂಡಿದ್ದಾರೆ. ನ.15ರಂದು ಮದ್ಯಾಹ್ನ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ 15ದಿನಗಳ ಬಳಿಕ ಪಕ್ಷದ ಇತರ ಜವಾಬ್ದಾರಿ ಸ್ಥಾನಗಳ ಆಯ್ಕೆ ಪ್ರಕಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಪುತ್ತೂರು ಮಂಡಲದ ನಿರ್ಗಮನ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮತ್ತು ನಗರ ಮಂಡಲದ ನಿರ್ಗಮನ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.