Home_Page_Advt
Home_Page_Advt
Home_Page_Advt
Breaking News

ಪರ್ಪುಂಜ ಹಿ.ಪ್ರಾ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ರೋಹಿಣಿ ಬಾಯಿ ರವರಿಗೆ ಬೀಳ್ಕೊಡುಗೆ ಹಾಗೂ ಮಕ್ಕಳ ದಿನಾಚರಣೆ ಸಮಾರಂಭ

ಪುತ್ತೂರು: ಪರ್ಪುಂಜ ಹಿ ಪ್ರಾ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ  ರೋಹಿಣಿ ಬಾಯಿರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನ. 14ರಂದು ನಡೆಯಿತು.

ಒಳಮೊಗ್ರು ಗ್ರಾ.ಪಂ ಅಧ್ಯಕ್ಷ ಯತಿರಾಜ್‌ ರೈ ಉದ್ಘಾಟಿಸಿ ನಿವೃತ್ತರನ್ನು ಗೌರವಿಸಿ ಶುಭ ಹಾರೈಸಿದರು. ಉಪ್ಪಿನಂಗಡಿ ಕ್ಲಸ್ಟರ್‌ ಸಿ.ಆರ್.ಪಿ ಮಹಮ್ಮದ್‌ ಅಶ್ರಫ್‌ , ಗ್ರಾ.ಪಂ ಸದಸ್ಯೆ  ಸುಂದರಿ, ಕುಂಬ್ರ ಕ್ಲಸ್ಟರ್‌ ಸಿ.ಆರ್.ಪಿ ಶಶಿಕಲಾ ಮಿತ್ರದಾಸ್‌ ರೈ ಡೆಕ್ಕಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಂಝರವರು ಅನಿಸಿಕೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷೆ ಅನ್ನಪೂರ್ಣ, ಮಾಜಿ ಅಧ್ಯಕ್ಷ ರಾಜೇಶ್‌ ರೈ ಪರ್ಪುಂಜ , ಪ್ರೇಮರಾಜ ರೈ ಪರ್ಪುಂಜ ಮಹಮ್ಮದ್‌ ಪರ್ಪುಂಜ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಗೆದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾಭಿವೃದ್ದಿ ಸಮಿತಿ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು, ಅಕ್ಷರದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಭಾರ ಮುಖ್ಯ ಶಿಕ್ಷಕಿ ಚಂದ್ರಾವತಿ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕಿ ಗ್ರೆಟ್ಟ ಮಸ್ಕರೇನಸ್‌ ಸನ್ಮಾನ ಪತ್ರ ವಾಚಿಸಿದರು. ದೈಹಿಕ ಶಿಕ್ಷಕಿ ಶ್ರೀಮತಿ ಪ್ರೇಮಲತಾ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.