Home_Page_Advt
Home_Page_Advt
Home_Page_Advt
Breaking News

ಪಾಣಾಜೆಯಲ್ಲಿ ರೇಂಜರ್ಸ್ ಶತಸಂಭ್ರಮ ತಾಲೂಕು ಮೇಳ – 2019 ಉದ್ಘಾಟನೆ

ನಿಡ್ಪಳ್ಳಿ: ದ.ಕ.ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ  ಪುತ್ತೂರು, ಪಾಣಾಜೆ ವಿದ್ಯಾವರ್ಧಕ ಸಂಘ, ಸುಬೋಧ ಪ್ರೌಢಶಾಲೆ ಶಾಲೆ   ಪಾಣಾಜೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ರೇಂಜರ್ಸ್ ಶತಸಂಭ್ರಮ ತಾಲೂಕು ಮೇಳ- 2019 ನ.21 ರಂದು   ಸುಬೋಧ ಪ್ರೌಢಶಾಲೆ ಪಾಣಾಜೆಯಲ್ಲಿ ಉದ್ಘಾಟನೆಗೊಂಡಿತು.

ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಾರ್ಯಕ್ರಮ ಉದ್ಘಾಟಿಸಿದರು. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ, ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ ಮಾಣಿ, ಮಂಗಳೂರು ಕೆ.ಎಂ.ಸಿ ಯ ದಾಕ್ಷಾಯಿಣಿ ಶೆಟ್ಟಿ, ಬೆಟ್ಟಂಪಾಡಿ ಕೆ.ಇ.ಬಿ ಜೂನಿಯರ್ ಇಂಜಿನಿಯರ್ ಪುತ್ತು.ಜೆ, ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಸದಾಶಿವ ರೈ ಸೂರಂಬೈಲು, ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪಿ.ಕೃಷ್ಣ ಭಟ್ ಪಿಲಿಂಗಲ್ಲು, ಸುಬೋಧ ಪ್ರೌಢಶಾಲೆಯ ಸಂಚಾಲಕ ಜಿ.ಮಹಾಬಲೇಶ್ವರ ಭಟ್ ಗಿಳಿಯಾಲು, ಪ್ರಚಾರ ಸಮಿತಿ ಸಂಚಾಲಕ ಡಾ.ಹಾಜಿ.ಎಸ್.ಅಬೂಬಕ್ಕರ್, ಪಾಣಾಜೆ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಮುಖ್ಯ ಗುರು ನಾರಾಯಣ ಎಸ್.ಕೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಭಂಡಾರಿ ಬೈಂಕ್ರೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.ದ.ಕ ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಅಧ್ಯಕ್ಷತೆ ವಹಿಸಿದ್ದರು. 

ಸ್ಕೌಟ್ಸ್  ಮತ್ತು ಗೈಡ್ಸ್ ಸದಸ್ಯರು ಪ್ರಾರ್ಥಿಸಿ, ಕಾರ್ಯಾಧ್ಯಕ್ಷ ಹೆಚ್ . ಶ್ರೀಧರ ರೈ ಸ್ವಾಗತಿಸಿ ಪ್ರಸ್ತಾಪಿಸಿದರು.ಕಾರ್ಯದರ್ಶಿ ವಿದ್ಯಾ ಆರ್.ಗೌರಿ ವಂದಿಸಿದರು. ಮೇಳದ ನಾಯಕ ಶ್ರೀಪತಿ ಭಟ್ ಇಂದಾಜೆ ಕಾರ್ಯಕ್ರಮ ನಿರೂಪಿಸಿದರು. ರೇಂಜರ್ಸ್ ಲೀಡರ್ ದೇವಕಿ ಹಾಗೂ ತಂಡದವರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.