Home_Page_Advt
Home_Page_Advt

ಗೋಳಿತ್ತೊಟ್ಟು: ದ್ವಿಚಕ್ರ ವಾಹನ ಸ್ಕಿಡ್ ಆಗಿ ಪಲ್ಟಿ ಕೋಲ್ಪೆ ನಿವಾಸಿ ಬಾಲಕ ಕಿರಣ್ ದುರ್ಮರಣ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ನ.28ರಂದು ಬೆಳಿಗ್ಗೆ ನಡೆದಿದೆ.

ಕೊಣಾಲು ಗ್ರಾಮದ ಕೋಲ್ಪೆ ನಿವಾಸಿ ಗಿರಿಯಪ್ಪ ಗೌಡ ಎಂಬವರ ಪುತ್ರ, ನೆಲ್ಯಾಡಿ ಸಂತಜಾರ್ಜ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಕಿರಣ್(15ವ.)ಮೃತಪಟ್ಟ ಬಾಲಕ. ಕಿರಣ್ ನ.28ರಂದು ಬೆಳಿಗ್ಗೆ ಕೋಲ್ಪೆಯ ತನ್ನ ಮನೆಯಿಂದ ಗೋಳಿತ್ತೊಟ್ಟು ಕಡೆಗೆ ದ್ವಿಚಕ್ರ ವಾಹನ(ಕೆಎ 21 ವೈ 0774)ದಲ್ಲಿ ಬರುತ್ತಿದ್ದ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಗ್ರಾಮದ ಗೋಳಿತ್ತೊಟ್ಟು ಪೇಟೆ ಸಮೀಪದ ಚೆಡವು ಎಂಬಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಪಲ್ಟಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕಿರಣ್‌ನನ್ನು ತಕ್ಷಣ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗೆ ಬಾಲಕ ಕಿರಣ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ಬಾಲಕ ತಂದೆ ಗಿರಿಯಪ್ಪ ಗೌಡ, ತಾಯಿ ಶಾರದಾ, ಓರ್ವ ಸಹೋದರ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.