Home_Page_Advt
Home_Page_Advt
Home_Page_Advt

ಉಪ್ಪಿನಂಗಡಿ ಸೈಂಟ್ ಮೇರಿಸ್ ಶಾಲಾ ವಾರ್ಷಿಕೋತ್ಸವ

ಉಪ್ಪಿನಂಗಡಿ: ಸಂಸ್ಕಾರಯುತ ಶಿಕ್ಷಣದಿಂದ ವಿದ್ಯಾರ್ಥಿಗಳ ಮುಂದಿನ ಜೀವನ ಮೌಲ್ಯ ವೃದ್ಧಿಯಾಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಡಿ. ೬ರಂದು ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಮತ್ತು ಪೋಷಕರ ಪಾಲಿಗೆ ಶಾಲಾ ವಾರ್ಷಿಕೋತ್ಸವ ಹಬ್ಬದ ಸಂಭ್ರಮವನ್ನು ತರಲಿದ್ದು, ಇಂದಿನ ಈ ವೇದಿಕೆ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಒಂದು ಒಳ್ಳೆಯ ಅವಕಾಶವಾಗಿದೆ ಎಂದರು.

ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಅಮಿತ್ ಪ್ರಕಾಶ್ ರೋಡ್ರಿಗಸ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ ಪ್ರತಿಭೆಯನ್ನು ಸಾದರಪಡಿಸಿದರೆ ಮುಂದೆ ಆ ವಿದ್ಯಾರ್ಥಿ ಉತ್ತಮ ನಾಗರೀಕನಾಗಿ ಮೂಡಿ ಬರುವಲ್ಲಿ ಯಾವುದೇ ಸಂದೇಹ ಇಲ್ಲ ಎಂದರು.
ಶಾಲಾ ಸಂಚಾಲಕರಾದ ಅಬೆಲ್ ಲೋಬೋ ಮಾತನಾಡಿ ಈ ವಿದ್ಯಾ ಸಂಸ್ಥೆ ಪ್ರಗತಿಯತ್ತ ಸಾಗುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಬೆಳಗಿಸುವಲ್ಲಿ ಆಸಕ್ತರಾಗಿ ಸಂಸ್ಥೆಗೆ ಕೀರ್ತಿ ತರುವಲ್ಲಿ ಪ್ರಯತ್ನಿಸಿ ಎಂದು ಹೇಳಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ವಾಣಿಶ್ರಿ, ಪಾಲನಾ ಸಮಿತಿ ಉಪಾಧ್ಯಕ್ಷ ಓಸ್ವಾಲ್ಡ್ ಪಿಂಟೋ, ಮುಖ್ಯ ಶಿಕ್ಷಕಿ ಮೀರಾ ರೋಡ್ರಿಗಸ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ಜೆಸಿಂತ ಪ್ಲೋರ ಸ್ವಾಗತಿಸಿ, ಶಿಕ್ಷಕ ಶಶಿಧರ್ ವಂದಿಸಿದರು. ಜಾಸ್ಮಿನ್ ಡಿ’ಸೋಜಾ ಹಾಗೂ ಸತೀಶ ಕಾರ್‍ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.