Home_Page_Advt
Home_Page_Advt
Home_Page_Advt

ದ.14: ಆನಾಜೆ ಮಹಾವಿಷ್ಣು ಸೇವಾ ಸಮಿತಿಯ ವಾರ್ಷಿಕೋತ್ಸವ -19ನೇ ವರ್ಷದ ಶನೈಶ್ಚರ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ವೀರಮಂಗಲ ಆನಾಜೆ ಶ್ರೀ ಮಹಾವಿಷ್ಣು ಸೇವಾ ಸಮಿತಿಯ 19ನೇ ವಾರ್ಷಿಕ ಸಂಭ್ರಮ ದ.14ರಂದು ಸಂಜೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆನಾಜೆ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ವಠಾರದಲ್ಲಿ ನಡೆಯಲಿದೆ.

ಸಂಜೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ, ಧಾರ್ಮಿಕ ಸಭೆ ನಡೆಯಲಿದೆ. ಸಭೆಯಲ್ಲಿ ಸಂಸ್ಕಾರ ಭಾರತಿ ಜಿಲ್ಲಾ ಸಂಚಾಲಕ ಕಶೆಕೋಡಿ ಸೂರ್ಯನಾರಾಯಣ ಭಟ್‌ರವರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ಸುಳ್ಯ ವಲಯ ಅಬಕಾರಿ ಇನ್ಸ್‌ಪೆಕ್ಟರ್ ಮಹಾಲಿಂಗ ನಾಯ್ಕ ನರಿಮೊಗರು ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕ ಎಸ್. ಅಂಗಾರ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿ.ಪಂ.ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು ಅವರು ಆಗಮಿಸಲಿದ್ದಾರೆ. ಸಭೆಯ ಬಳಿಕ ಶನೈಶ್ವರ ಪೂಜಾಯ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ: ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವೀರಮಂಗಲ,ಭಕ್ತಕೋಡಿ ಶ್ರೀ ಕೃಷ್ಣ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ರಚಿಸಿ, ನಿರ್ದೇಶಿಸಿದ ನೃತ್ಯ ರೂಪಕ ‘ಕಾತೀಕೇಯ ಕಲ್ಯಾಣ’ ಮತ್ತು ಶ್ರೀ ಮಹಾವಿಷ್ಣು ಸೇವಾ ಸಮಿತಿ ಸದಸ್ಯರಿಂದ ಮತ್ತು ಊರವರಿಂದ ವಿವಿಧ ವಿನೋದಾವಳಿಗಳು ಹಾಗೂ ಕುಸಲ್ದ ಫ್ರೆಂಡ್ಸ್ ಉಬಾರ್ ಇವರಿಂದ ಕಾಮಿಡಿ ಷೋ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.