Home_Page_Advt
Home_Page_Advt
Home_Page_Advt
Breaking News

ಎನ್ ಆರ್ ಸಿ, ಸಿಎಎ ಬಗ್ಗೆ ಮಾಹಿತಿ ನೀಡಲು ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

ಪುತ್ತೂರು: ಭಾರತ ಸರಕಾರ ಜಾರಿಗೆ ತಂದಿರುವ ಎನ್ ಆರ್ ಸಿ ಮತ್ತು ಸಿಎಎ ಬಗ್ಗೆ ಮಾಹಿತಿ ನೀಡುವಂತೆ ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ರವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಸಂಚಾಲಕ ರೂಪೇಶ್ ರೈ ಅಲಿಮಾರ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ಭಾರತ ಸರಕಾರ ಜಾರಿಗೆ ತಂದಿರುವ ಎನ್ ಆರ್ ಸಿ ಮತ್ತು ಸಿಎಎ ಬಗ್ಗೆ ಸಾಮಾನ್ಯ ಜನರಿಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಇದರಿಂದಾಗಿ ಬಹಳ ತೊಂದರೆಯಾಗಿರುತ್ತದೆ. ಆದ್ದರಿಂದ ರೈತ ಸಂಘದ ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯನ್ನು ಒದಗಿಸುವ ಕುರಿತು ತಾವು ಆದಷ್ಟು ಶೀಘ್ರದಲ್ಲಿ ಸಭೆಯೊಂದನ್ನು ಕರೆದು ಸ್ಪಷ್ಟ ಮಾಹಿತಿ ನೀಡಿದಲ್ಲಿ ಬಹಳ ಅನುಕೂಲವಾಗುತ್ತದೆ. ಇದರಿಂದಾಗಿ ಮುಂದಕ್ಕೆ ಇತರ ಎಲ್ಲಾ ರೈತರಿಗೆ ಹಾಗೂ ಸಾರ್ವಜನಿಕರಿಗೆ ಇದರ ಪ್ರಯೋಜನವನ್ನು ತಿಳಿಸಲು ನಮ್ಮ ಸಂಘದ ಸದಸ್ಯರಿಗೆ ಬಹಳ ಅನುಕೂಲವಾಗುತ್ತದೆ. ಅಲ್ಲದೆ ಜನ ಸಾಮಾನ್ಯರಿಗೆ ಇರುವ ತಪ್ಪು ಅಭಿಪ್ರಾಯಗಳನ್ನು ಹೋಗಲಾಡಿಸಲು ಅನುಕೂಲವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.