Home_Page_Advt
Home_Page_Advt
Home_Page_Advt
Breaking News

ಪರ್ಪುಂಜದಲ್ಲಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ


ಪುತ್ತೂರು: ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿ ನೂತನ ಅಂಗನವಾಡಿ ಕಟ್ಟಡವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಪಂ, ತಾಪಂ ಹಾಗೂ ಸ್ಥಳೀಯ ಸಾರ್ವಜನಿಕರ ಉದ್ಯೋಗ ಖಾತ್ರಿ ಯೋಜನೆಯಡಿ ಅಂಗನವಾಡಿ ಕಟ್ಟಡದ ನಿರ್ಮಾಣ ಕಾರ್ಯ ನಡೆದಿತ್ತು.

ಕಟ್ಟಡ ಉದ್ಘಾಟಿಸಿ ಮಾತನಾಡಿದ ಶಾಸಕರು ಅಂಗನವಾಡಿಯಲ್ಲಿ ಕಲಿಯುವ ಮಕ್ಕಳು ಸರಕಾರಿ ಶಾಲೆಗೆ ದಾಖಲಾಗುವಂತೆ ನೋಡಿಕೊಳ್ಳಬೇಕಿದೆ.ಕೆಲವೊಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ, ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಯುಕೆಜಿ ಎಲ್‌ಕೆಜಿ ತರಗತಿಗಳ ಸೌಲಭ್ಯ ಇರುವ ಕಾರಣ ಮಕ್ಕಳ ದಾಖಲಾತಿ ಹೆಚ್ಚು ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಾಪಂ ಸದಸ್ಯ ಹರೀಶ್‌ಬಿಜತ್ರೆ,ಗ್ರಾಪಂ ಸದಸ್ಯರುಗಳಾದ ಪಿ ಎಂ ಅಬ್ದುಲ್‌ರಹಿಮಾನ್ ಅರಿಯಡ್ಕ, ವಿಶ್ವನಾಥ, ಸುನಂತ, ಉಷಾ ನಾರಾಯಣ, ಶೀನಪ್ಪ ನಾಯ್ಕ ಬೊಳ್ಳಾಡಿ, ಕುಂಬ್ರ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ಕೈಕಾರ, ನಿರ್ದೇಶಕ ಸಂತೋಷ್‌ಕುಮಾರ್ ರೈ ಕೈಕಾರ, ಸುಧಾಕರ ಆಳ್ವ ಕಲ್ಲಡ್ಕ, ಕುಂಬ್ರ ಬಿಜೆಪಿ ಬೂತ್ ಅಧ್ಯಕ್ಷ ಮಾಧವ ರೈ ಕುಂಬ್ರ, ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಪುರಂದರ್ ರೈ ಉಪಸ್ಥಿತರಿದ್ದರು.
ಬಿಜೆಪಿ ಮಂಡಲ ಉಪಾಧ್ಯಕ್ಷ ನಿತೀಶ್‌ಕುಮಾರ್ ಶಾಂತಿವನ ಸ್ವಾಗತಿಸಿ, ಒಳಮೊಗ್ರು ಗ್ರಾಮ ಸಮಿತಿ ಬಿಜೆಪಿ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.