Home_Page_Advt
Home_Page_Advt
Home_Page_Advt
Breaking News

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನನ್ಯ ಅಚ್ಚುತ ಮೂಡೆತ್ತಾಯ, ಉಪಾಧ್ಯಕ್ಷರಾಗಿ ರಮೇಶ್ ಎಂ.

  • ಏಳನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಿದ ನನ್ಯ

 

                                                                     ನನ್ಯ ಅಚ್ಚುತ ಮೂಡೆತ್ತಾಯ

 

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ನನ್ಯ ಅಚ್ಚುತ ಮೂಡೆತ್ತಾಯ, ಉಪಾಧ್ಯಕ್ಷರಾಗಿ ರಮೇಶ್ ಪೂಜಾರಿ ಮುಂಡ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.24ರಂದು ಬೆಳಿಗ್ಗೆ ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಅಧ್ಯಕ್ಷ/ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧ ಆಯ್ಕೆ ನಡೆಸಲಾಯಿತು. ಸಂಘದ ನೂತನ ನಿರ್ದೇಶಕರುಗಳಾದ ಲೋಕೇಶ್ ಚಾಕೋಟೆ, ಶಿವಪ್ರಸಾದ್ ಕೊಚ್ಚಿ, ಮಂಜುನಾಥ ರೈ, ಪ್ರವೀಣ್ ರೈ , ಶ್ರೀಧರ್ ರಾವ್, ರಾಮಣ್ಣ ನಾಯ್ಕ, ಲೋಹಿತ್ ಅಮ್ಚಿನಡ್ಕ, ಚಂದ್ರಶೇಖರ ಗೌಡ, ಮೋಹನಾಂಗಿ, ಹೇಮಾವತಿ ಚಾಕೋಟೆ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರತಿನಿಧಿ ಶರತ್‌ರವರು ಉಪಸ್ಥಿತರಿದ್ದರು. ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿಯ ಅಧೀಕ್ಷಕ ನಾಗೇಂದ್ರರವರು ಚುನಾವಣಾ ರಿಟರ್ನಿಂಗ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ ಮತ್ತು ಸಿಬಂದಿಗಳು ಸಹಕರಿಸಿದರು. ಜ.16ರಂದು ನಡೆದಿದ್ದ 12 ಸ್ಥಾನಗಳ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತದ ಸಹಕಾರ ಭಾರತಿಯ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು.

ಏಳನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಿದ ನನ್ಯ:
ರಾಜಕೀಯ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿ ಅನನ್ಯ ಸಾಧನೆಯ ಹರಿಕಾರರಾಗಿರುವ ನನ್ಯ ಅಚ್ಚುತ ಮೂಡೆತ್ತಾಯರವರು ಶತ ವರ್ಷ ಪೂರೈಸಿರುವ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯಲ್ಲಿ ಸತತ 4ನೇ ಬಾರಿಗೆ ಮತ್ತು ಒಟ್ಟು 7ನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಜ.16ರ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳೊಂದಿಗೆ ಜಯಗಳಿಸಿದ್ದ ನನ್ಯ ಅಚ್ಚುತ ಮೂಡೆತ್ತಾಯರವರು ನಿರೀಕ್ಷೆಯಂತೆಯೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 1983ರಲ್ಲಿ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನನ್ಯರವರು ಬಳಿಕ 1986, 1995, 2005, 2010, 2015, 2020ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದರಲ್ಲೂ 2005ರ ನಂತರ ಸತತ ೪ ಅವಧಿಗೂ ನನ್ಯ ಅಚ್ಚುತ ಮೂಡೆತ್ತಾಯರವರೇ ಅಧ್ಯಕ್ಷರಾಗಿದ್ದಾರೆ.

ಪ್ರಥಮ ಪ್ರಯತ್ನದಲ್ಲೇ ಒಲಿದ ಉಪಾಧ್ಯಕ್ಷ ಪಟ್ಟ:
ಸಹಕಾರಿ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಚುನಾವಣೆ ಎದುರಿಸಿ ಕಾವು ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದ ರಮೇಶ್ ಪೂಜಾರಿ ಮುಂಡ್ಯರವರಿಗೆ ಪ್ರಥಮ ಪ್ರಯತ್ನದಲ್ಲೇ ಉಪಾಧ್ಯಕ್ಷ ಸ್ಥಾನದ ಪಟ್ಟ ಲಭಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.