Home_Page_Advt
Home_Page_Advt
Breaking News

ಎಸ್.ಕೆ. ಆನಂದ್, ಜಗದೀಶ್ ಆಚಾರ್ಯ, ಸುರೇಶ್ ರೈ ಸೂಡಿಮುಳ್ಳುರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಎಸ್.ಕೆ. ಆನಂದ್ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು

ಪುತ್ತೂರು: 2019-20ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಮಾಸ್ಟರ್ ಪ್ಲಾನರಿಯ ಮಾಲಕರಾದ ಮಂಜಲ್ಪಡ್ಪು ನಿವಾಸಿ ಎಸ್.ಕೆ. ಆನಂದ ಕುಮಾರ್, ಯುವ ಹಾಡುಗಾರರಾದ ನೆಹರೂನಗರ ನಿವಾಸಿ ಜಗದೀಶ್ ಆಚಾರ್ಯ ಮತ್ತು ಸಂಘಟಕರಾದ ಸವಣೂರು ನಿವಾಸಿ ಸುರೇಶ್ ರೈ ಸೂಡಿಮುಳ್ಳುರವರಿಗೆ ಜ.೨೬ರಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಜಗದೀಶ್ ಆಚಾರ್ಯರವರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು

 

ಸುರೇಶ್ ರೈ ಸೂಡಿಮುಳ್ಳುರವರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು

ಜ.26ರಂದು ಪೂರ್ವಾಹ್ನ 9 ಗಂಟೆಗೆ ಮಂಗಳೂರು ನೆಹರೂ  ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ನಡೆದ ನಂತರ ಜರಗಿದ 2019-20ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನೀಡುವ ಜಿಲ್ಲಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್.ಕೆ. ಆನಂದ ಕುಮಾರ್, ಜಗದೀಶ್ ಆಚಾರ್ಯ ಮತ್ತು ಸುರೇಶ್ ರೈ ಸೂಡಿಮುಳ್ಳುರವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಭೋಜೇಗೌಡ, ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಹಲವರು ಉಪಸ್ಥಿತರಿದ್ದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.