Home_Page_Advt
Home_Page_Advt
Breaking News

ದೇಶ ದ್ರೋಹದ ಘೋಷಣೆ ಹಿಂದಿರುವವರನ್ನು ಪತ್ತೆ ಹಚ್ಚಿ ಶಿಕ್ಷೆ ವಿಧಿಸಿ – ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆಯಲ್ಲಿ ಚಿನ್ಮಯ್ ರೈ

ಪುತ್ತೂರು: ದೇಶದ್ರೋಹಿ ಘೋಷಣೆ ಕೂಗಿದ ಅಮೂಲ್ಯ ಲಿಯೋನ್‌ಗೆ ಕಠಿಣ ಶಿಕ್ಷೆ ನೀಡಬೇಕು. ಆಕೆಯ ಪರವಾಗಿ ಯಾವುದೇ ವಕೀಲರು ವಾದ ಮಾಡಬಾರದು. ಈ ಘೋಷಣೆಯ ಹಿಂದೆ ಇರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರ ವಿರದ್ದ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಹಿಂದೂ ಜಾಗರಣಾ ವೇದಿಕೆಯ ಪುತ್ತೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನ್ಮಯ್ ರೈ ಆಗ್ರಹಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ವಿರುದ್ಧದ ಹೋರಾಟದ ವೇದಿಕೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ದೇಶ ದ್ರೋಹದ ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಇಲ್ಲಿನ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಗಾಂಧಿಕಟ್ಟೆಯ ಬಳಿ ಫೆ. 22ರಂದು ಸಂಜೆ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅಮೂಲ್ಯ ನಿಯೋನ್ ಅವಳ ಘೋಷಣೆಯ ಹಿಂದೆ ಇರುವ ವ್ಯಕ್ತಿಗಳನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಇವರಿಗೆ ನೀಡುವ ಶಿಕ್ಷೆಯು ಎಲ್ಲಾ ದೇಶದ್ರೋಹಿಗಳಿಗೆ ಪಾಠವಾಗಬೇಕು. ಇಲ್ಲದಿದ್ದಲ್ಲಿ ಮುಂದೆ ಇನ್ನಷ್ಟು ಕಠಿಣ ಪರಿಸ್ಥಿತಿ ಎದುರಾಗಬಹುದು ಎಂದರು. ಸಿಎಎ, ಎನ್‌ಆರ್‌ಸಿ ವಿರುದ್ದ ಹೋರಾಟ ನಡೆಸುತ್ತಿರುವವರು ಪಾಕಿಸ್ಥಾನ ಏಜೆಂಟ್ ಆಗಿರುವ ಗುಮಾನಿಯಿದ್ದು, ಅವರಿಗೆ ಹೊರ ದೇಶಗಳಿಂದ ಫಂಡ್ ಬರುತ್ತಿದೆಯೇ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಹೇಳಿದರು.
ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಹಿಂದೂ ಜಾಗರಣಾ ವೇದಿಕೆ ನಗರ ಅಧ್ಯಕ್ಷ ಕೃಷ್ಣಪ್ರಸಾದ್ ಶೆಟ್ಟಿ, ವಿಶ್ವಹಿಂದೂ ಪರಿಷತ್‌ನ ಜಯಂತ ಕುಂಜೂರುಪಂಜ, ಬಜರಂಗದಳದ ಹರೀಶ್ ದೋಳ್ಪಾಡಿ, ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಅವಿನಾಶ್ ಪುರುಷರಕಟ್ಟೆ,  ಬಜರಂಗದಳದ ಸಾಪ್ತಾಹಿಕ್ ಪ್ರಮುಖ್ ವಿಶಾಕ್ ರೈ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.