Home_Page_Advt
Home_Page_Advt
Home_Page_Advt
Home_Page_Advt

ಲಾಕ್‌ಡೌನ್ ಮಧ್ಯೆಯೂ ಕಳ್ಳರ ಕೈಚಳಕ: ರಾಮಕುಂಜದಲ್ಲಿ ಪಂಚಾಯತ್ ಕಚೇರಿ, ಶಾಲೆ, ಅಂಗಡಿಯಿಂದ ಕಳ್ಳತನ

Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಮಾರಕ ಕೊರೊನಾ ಸೋಂಕು ಹರಡದಂತೆ ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೂ ಇದಕ್ಕೆ ಕ್ಯಾರೇ ಎನ್ನದೇ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ರಾಮಕುಂಜದಲ್ಲಿ ಏ.7ರಂದುರಾತ್ರಿ ನಡೆದಿದೆ.

ರಾಮಕುಂಜ ಗ್ರಾಮ ಪಂಚಾಯತ್ ಕಚೇರಿ, ರಾಮಕುಂಜೇಶ್ವರ ಪ.ಪೂ.ಕಾಲೇಜು ಹಾಗೂ ರಾಮಕುಂಜ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದ ಎರಡು ಅಂಗಡಿಗಳಿಗೆ ಕಳೆದ ರಾತ್ರಿ ನುಗ್ಗಿರುವ ಕಳ್ಳರು ಹಣ ದೋಚಿರುವುದಾಗಿ ವರದಿಯಾಗಿದೆ. ರಾಮಕುಂಜ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಇಂಟರ್ನೆಟ್‌ನ ಮೋಡೆಮ್ ದೋಚಿದ್ದು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಡ್ರವರ್ ತೊರೆದು ಹಣಕ್ಕಾಗಿ ಹುಡುಕಾಡಿರುವುದು ಕಂಡುಬಂದಿದೆ. ಗ್ರಾಮ ಪಂಚಾಯತ್ ಕಚೇರಿ ಮುಂಭಾಗದ ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿರುವ ಎಸ್‌ಬಿಐನ ಗ್ರಾಹಕ ಸೇವಾ ಕೇಂದ್ರಕ್ಕೂ ನುಗ್ಗಿದ್ದು ಇಲ್ಲಿಂದ ನಗದು ದೋಚಿದ್ದಾರೆ. ಇದೇ ಕಟ್ಟಡದಲ್ಲಿರುವ ವಿ ಕನೆಕ್ಟ್ ಮೊಬೈಲ್ ಅಂಗಡಿಗೂ ನುಗ್ಗಿ ಡಿವಿಆರ್ ಕಳವುಗೈದಿದ್ದು ಡ್ರವರ್‌ನ ಲಾಕ್ ತೆಗೆದು ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ರಾಮಕುಂಜ ಪ.ಪೂ.ಕಾಲೇಜಿನ ಕಚೇರಿಗೂ ನುಗ್ಗಿದ್ದು ಇಲ್ಲಿಂದ ಹಣ ದೋಚಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ದಿನಕರ ಶೆಟ್ಟಿ, ಕಡಬ ಎಸ್‌ಐ ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.