






ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ಸೆ. 12 ರಂದು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೇಮಿಳ ಜೆಸ್ಸಿ ಕ್ರಾಸ್ತಾ ಅವರು, “ಕ್ರೀಡೆ ಎಂದರೆ ಕೇವಲ ಗೆಲುವು-ಸೋಲಿನ ಲೆಕ್ಕಾಚಾರವಲ್ಲ. ಕ್ರೀಡೆಯು ಶಿಸ್ತು, ಸಮಯಪಾಲನೆ, ಏಕಾಗ್ರತೆ, ಆತ್ಮವಿಶ್ವಾಸ, ಸಹನೆ ಮತ್ತು ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಕಲಿಸುವ ಅತ್ಯುತ್ತಮ ಪಾಠಶಾಲೆ” ಎಂದು ಅಭಿಪ್ರಾಯಪಟ್ಟರು.
ಸಮಾರೋಪ ಸಮಾರಂಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸೇನೋರಿಟ ಆನಂದ್ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.



ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ: ಸರಕಾರಿ ಪದವಿ ಪೂರ್ವ ಕಾಲೇಜು, ಉಪ್ಪಿನಂಗಡಿ,ದ್ವಿತೀಯ ಸ್ಥಾನ: ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು,ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ: ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು, ದ್ವಿತೀಯ ಸ್ಥಾನ: ಸರಕಾರಿ ಪದವಿ ಪೂರ್ವ ಕಾಲೇಜು, ಉಪ್ಪಿನಂಗಡಿ ಪಡೆದುಕೊಂಡಿತು. ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿವೆ. ವೇದಿಕೆಯಲ್ಲಿ ನಿರ್ಮಲ ಉಪಸ್ಥಿತರಿದ್ದರು. ಉಪನ್ಯಾಸಕಿ ಚಿತ್ರಲೇಖ ಸ್ವಾಗತಿಸಿದರು. ಶೋಭಾ ಕೆ. ಮತ್ತು ದಾಮೋಧರ್ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದ ಯಶಸ್ಸಿಗೆ ಸಹಕರಿಸಿದ ಸ.ಪ.ಪೂ ಕಾಲೇಜು ಕೊಂಬೆಟ್ಟಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು, ಯುವಜನ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ನೋಡಲ್ ಅಧಿಕಾರಿ ಮಮಚ್ಚಾನ್, ಕ್ರೀಡಾಧಿಕಾರಿಗಳು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಉಪನ್ಯಾಸಕ ವೃಂದದವರಿಗೆ ಪ್ರಾಂಶುಪಾಲರು ಕೃತಜ್ಞತೆ ಸಲ್ಲಿಸಿದರು.













