ಕಸವಲ್ಲ, ಸಂಪನ್ಮೂಲ: ಪ್ಲಾಸ್ಟಿಕ್‌ನಿಂದ ಇಕೋ-ಬೆಂಚ್’ ರಾಮಕುಂಜ ಪ.ಪೂ.ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ವಿನೂತನ ಪ್ರಯತ್ನ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಿಕೊಂಡು ಇಕೋ-ಬ್ರಿಕ್ಸ್ ಬೆಂಚ್ ನಿರ್ಮಿಸಲಾಯಿತು.

ಕಾಲೇಜಿನ ಎನ್‌ಎಸ್‌ಎಸ್ ಸ್ವಯಂ ಸೇವಕರು ಸಂಗ್ರಹಿಸಿದ ಬಳಕೆಯಾದ ಪ್ಲಾಸ್ಟಿಕ್ ಬಾಟಲಿಗಳೊಳಗೆ ಸಣ್ಣ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯವನ್ನು ತುಂಬಿ ಇಕೋ-ಬ್ರಿಕ್ಸ್ಗಳನ್ನು ಸಿದ್ಧಪಡಿಸಿದರು. ಬಳಿಕ ಅವುಗಳನ್ನು ಸೂಕ್ತ ರೀತಿಯಲ್ಲಿ ಜೋಡಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಳಸಬಹುದಾದ ಬೆಂಚ್ ನಿರ್ಮಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕೆ. ಅವರು ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯವು ಪರಿಸರಕ್ಕೆ ದೊಡ್ಡ ಸವಾಲಾಗಿದೆ. ಆದರೆ ಅದನ್ನು ವೈಜ್ಞಾನಿಕ ಹಾಗೂ ಸೃಜನಾತ್ಮಕ ರೀತಿಯಲ್ಲಿ ಮರುಬಳಕೆ ಮಾಡಿದರೆ ಸಮಾಜಕ್ಕೆ ಉಪಯುಕ್ತವಾದ ಸಂಪನ್ಮೂಲವನ್ನಾಗಿ ಪರಿವರ್ತಿಸಬಹುದು. ಕಾಲೇಜಿನ ಎನ್‌ಎಸ್‌ಎಸ್ ಸ್ವಯಂ ಸೇವಕರು ಪ್ಲಾಸ್ಟಿಕ್ ತ್ಯಾಜ್ಯದಿಂದ ಇಕೋ-ಬ್ರಿಕ್ಸ್ ತಯಾರಿಸಿ ಬೆಂಚ್ ನಿರ್ಮಿಸಿರುವುದು ಅತ್ಯಂತ ಶ್ಲಾಘನೀಯ ಹಾಗೂ ಮಾದರಿ ಕಾರ್ಯವಾಗಿದೆ. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ, ಸ್ವಚ್ಛತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ ಎಂದು ಹೇಳಿದರು.

ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕೀರ್ತನ್ ಬಿ.ಜಿ. ಅವರು ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯವನ್ನು ಕೇವಲ ಸಮಸ್ಯೆಯಾಗಿ ನೋಡದೆ, ಸೃಜನಾತ್ಮಕವಾಗಿ ಮರುಬಳಕೆ ಮಾಡುವ ಮೂಲಕ ಸಮಾಜಕ್ಕೆ ಉಪಯುಕ್ತವಾದ ವಸ್ತುಗಳನ್ನು ನಿರ್ಮಿಸಬಹುದು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತವೆ ಎಂದು ತಿಳಿಸಿದರು.

‘Waste Plastic-Eco-Bricks- Useful Bench ‘ ಎಂಬ ಪರಿಕಲ್ಪನೆಯ ಮೂಲಕ ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸುವ ಸಂದೇಶವನ್ನು ಎನ್‌ಎಸ್‌ಎಸ್ ಘಟಕ ಸಾರಿತು. ಪರಿಸರ ಸ್ನೇಹಿ ಹಾಗೂ ಸೃಜನಾತ್ಮಕ ಈ ಯೋಜನೆಯು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ, ಸ್ವಚ್ಛತೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮನೋಭಾವವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು.

ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿಗಳು, ಸಹಾಯಕ ಎನ್‌ಎಸ್‌ಎಸ್ ಅಧಿಕಾರಿಗಳು, ಕಾಲೇಜುನ ಉಪನ್ಯಾಸಕರು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದು, ಬೆಂಚ್ ನಿರ್ಮಾಣ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಎನ್‌ಎಸ್‌ಎಸ್ ಸ್ವಯಂಸೇವಕರ ಶ್ರಮ ಹಾಗೂ ಸಹಕಾರದಿಂದ ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿತು.

LEAVE A REPLY

Please enter your comment!
Please enter your name here