






ಉಪ್ಪಿನಂಗಡಿ: ಇಲ್ಲಿನ ಗ್ರಾ.ಪಂ.ನ ಹೆಚ್ಚುವರಿ ಪ್ರಭಾರ ಪಿಡಿಒ ಆಗಿ 34 ನೆಕ್ಕಿಲಾಡಿ ಗ್ರಾ.ಪಂ.ನ ಪಿಡಿಒ ರವಿಚಂದ್ರ ಅವರನ್ನು ನಿಯುಕ್ತಿಗೊಳಿಸಿ ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆದೇಶಿಸಿದ್ದಾರೆ.


ಉಪ್ಪಿನಂಗಡಿ ಗ್ರಾ.ಪಂ.ನ ಹೆಚ್ಚುವರಿ ಪ್ರಭಾರ ಪಿಡಿಒ ಆಗಿ ಆರ್ಯಾಪು ಗ್ರಾ.ಪಂ.ನ ಪಿಡಿಒ ವಿಲ್ಫ್ರೇಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ನಿಯುಕ್ತಿಗೊಳಿಸಿ ಈ ಹಿಂದೆ ತಾ.ಪಂ. ಕಾರ್ಯನಿರ್ವಾಹಕಾಧಿಕಾರಿಯವರು ಆದೇಶಿಸಿದ್ದರು. ಆದರೆ ವಿಲ್ಫ್ರೇಡ್ ಲಾರೆನ್ಸ್ ರೊಡ್ರಿಗಸ್ ಅವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ದೂರುಗಳಿರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಆದೇಶವನ್ನು ರದ್ದುಪಡಿಸಿ ಇದೀಗ ರವಿಚಂದ್ರ ಯು. ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.













