ತಾಲೂಕು ಮಟ್ಟದ ಕಬಡ್ಡಿ: ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ (ಪುತ್ತೂರು) ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಪಾಂಗಾಳಾಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಶ್ರೇಷ್ಠ ಆಟದ ಮೂಲಕ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

​​ಕ್ರೀಡಾಂಗಣದಲ್ಲಿ ಅದ್ಭುತ ಪ್ರದರ್ಶನ ನೀಡಿದ ಜುವೆನ್ ಡ್ಯಾಸೆಲ್ ಕುಟಿನ್ಹಾ ‘ಬೆಸ್ಟ್ ರೈಡರ್’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.ಪಂದ್ಯದ ಜಾಣ್ಮೆಯ ಆಟದ ಮೂಲಕ ಹಾರ್ದಿಕ ಪಿ ‘ಬೆಸ್ಟ್ ಆಲ್ ರೌಂಡರ್’ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಶಾಲಾ ಪ್ರಾಂಶುಪಾಲರಾದ ಭಗಿನಿ ಅನಿತಾ ಟ್ರೆಸ್ಸಿಯವರ ಮಾರ್ಗದರ್ಶನದಲ್ಲಿ, ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ತಂಡಕ್ಕೆ ನೀಡಿದ ಅತ್ಯುತ್ತಮ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here