






ಪುತ್ತೂರು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಈಶ್ವರಮಂಗಲ ಶಾಖೆಯ ನವೀಕೃತ ಬ್ಯಾಂಕಿಂಗ್ ವಿಭಾಗದ ಉದ್ಘಾಟನಾ ಕಾರ್ಯಕ್ರಮ ಸೆ.19ರಂದು ಬೆಳಿಗ್ಗೆ 10.30ರಿಂದ ಶಾಖೆಯ “ಸಹಕಾರಿ ಸದನ” ಭವನದಲ್ಲಿ ನಡೆಯಲಿದೆ.


ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರು ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ನವೀಕೃತ ಬ್ಯಾಂಕಿಂಗ್ ವಿಭಾಗ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳೆಜ್ಜ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ.ರಘು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.













