







ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ 60ನೇ ವರ್ಷದ ಗಣೇಶೋತ್ಸವಕ್ಕೆ ಸೆ.16ರಂದು ರಾತ್ರಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಶ್ರೀ ಗಣಪತಿಯ ಆಶೀರ್ವಾದ ಪಡೆದರು.



ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಅವರು ಸಂಸದರನ್ನು ಬರಮಾಡಿಕೊಂಡರು. ಈ ಸಂದರ್ಭ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ ಸಹಿತ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.













