ಪ್ರಧಾನಿ ಮೋದಿ ಹುಟ್ಟುಹಬ್ಬ: ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ

0

ಉಪ್ಪಿನಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ 76 ನೇ ಜನ್ಮದಿನಾಚರಣೆಯ ಪ್ರಯುಕ್ತ ಬಿಜೆಪಿ ಮುಖಂಡರಿಂದ ಕೋಡಿಂಬಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು.


ದೇಶದ ನಾಯಕತ್ವವನ್ನು ಇನ್ನೂ ಹಲವು ವರ್ಷಗಳ ಕಾಲ ವಹಿಸುವಂತಾಗಲು ಅವರಿಗೆ ಆರೋಗ್ಯ ಹಾಗೂ ಆಯುಷ್ಯವನ್ನು ಕರುಣಿಸಬೇಕೆಂದು, ಎದುರಾಗುವ ಯಾವುದೇ ಸವಾಲನ್ನು ಎದುರಿಸುವ ಕ್ಷಾತ್ರ ತೇಜಸ್ಸನ್ನು ಮೋದಿಯವರಿಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಟಂದೂರು , ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಉಪಾಧ್ಯಕ್ಷ ವಿದ್ಯಾಧರ ಜೈನ್, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರೆಮಜಲು, ಮುಖಂಡರಾದ ಮೋಹನ್ ಪಕ್ಕಳ, ಮುಕುಂದ ಬಜತ್ತೂರು , ಹರಿರಾಮಚಂದ್ರ, ಸದಾನಂದ ಪೂಜಾರಿ, ಸಂತೋಷ್ ಕುಮಾರ್ ಪರಂದಾಜೆ, ಆದೇಶ್ ಶೆಟ್ಟಿ, ರಾಮಚಂದ್ರ ಪೂಜಾರಿ, ರಾಧಾಕೃಷ್ಣ ಭಟ್ ಬೊಳ್ಳಾವು, ಉಷಾಚಂದ್ರ ಮುಳಿಯ, ರಾಜೇಶ್ ಪಿಜಕ್ಕಳ, ಉಮೇಶ್ ಬೆದ್ರೋಡಿ, ನಿತೀನ್ ತಾರಿತ್ತಡಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here