







ಕಾಣಿಯೂರು: ದ.ಕ ಜಿಲ್ಲೆಯ ಸಿ ಮತ್ತು ಬಿ ಗ್ರೇಡ್ ದೇವಸ್ಥಾನಗಳಿಗೆ ಶ್ರೀಮಂತ ದೇವಸ್ಥಾನಗಳಿಂದ ಅನುದಾನ ನೀಡುವಂತೆ ಹಾಗೂ ಕಸ್ತೂರಿ ರಂಗನ್ ವರದಿ ರಾಜ್ಯದಲ್ಲಿ ಜಾರಿಯಾಗದಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವಂತೆ ನ್ಯಾಯವಾದಿ ಮತ್ತು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಅವರು ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸಿ ಮತ್ತು ಬಿ ಗ್ರೇಡ್ ದೇವಸ್ಥಾನಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಶ್ರೀಮಂತ ದೇವಸ್ಥಾನಗಳ ಅನುದಾನದಿಂದ ಅವುಗಳ ಅಭಿವೃದ್ಧಿ ಹಾಗೂ ನಿತ್ಯ ಪೂಜೆಗಳಿಗೆ ಅನುಕೂಲವಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡು ಮತ್ತು ಕರಾವಳಿ ಭಾಗದ ಜನಜೀವನದ ಮೇಲೆ ದುಷ್ಪರಿಣಾಮ ಬೀರಲಿದ್ದು, ಅದನ್ನು ರಾಜ್ಯದಲ್ಲಿ ಜಾರಿಗೊಳಿಸಬಾರದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.













